Central Bank Of India Recruitment 2024: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 3000 ಹುದ್ದೆ; ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ

Advertisements

Central Bank Of India Recruitment 2024: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾವು ಖಾಲಿ ಇರುವ 3000 ಅಪ್ರೆಂಟಿಸ್‌ ಹುದ್ದೆಗಳನ್ನು ನೇಮಕ ಮಾಡಲು ಫೆಬ್ರವರಿ ತಿಂಗಳಲ್ಲಿ ಅರ್ಜಿ ಆಹ್ವಾನಿಸಿತ್ತು. ಇದೀಗ ಅರ್ಜಿಗೆ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಇದರ ಜೊತೆಗೆ ಸಿಬಿಟಿ ಪರೀಕ್ಷೆಯ ಸಂಭಾವ್ಯ ದಿನಾಂಕವನ್ನು ವಿಸ್ತರಣೆ ಮಾಡಿದೆ.

ಮಾರ್ಚ್‌ 06 ರವರೆಗೆ ಬ್ಯಾಂಕ್‌ ಅರ್ಜಿಗೆ ಅವಕಾಶ ನೀಡಿತ್ತು. ಇದೀಗ ಬ್ಯಾಂಕ್‌ ಅರ್ಜಿ ದಿನಾಂಕ ವಿಸ್ತರಣೆಯನ್ನು ಮಾರ್ಚ್‌ 27 ರವರೆಗೆ ಮಾಡಿದೆ. ಹಾಗಾಗಿ ಬ್ಯಾಂಕ್‌ ಉದ್ಯೋಗಾಕಾಂಕ್ಷಿಗಳು ಈಗಲೇ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 21-02-2024
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 27-03-2024
ಆನ್‌ಲೈನ್‌ ಕಂಪ್ಯೂಟರ್‌ (ಸಿಬಿಟಿ) ಪರೀಕ್ಷಾ ಸಂಭಾವ್ಯ ದಿನಾಂಕ: 31-03-2024

ವಯೋಮಿತಿ: ಅಭ್ಯರ್ಥಿಯು 01.04.1996 ರಿಂದ 31.03.2004 ರ ನಡುವೆ ಜನಿಸಿರಬೇಕು. ಕನಿಷ್ಠ ವಯೋಮಿತಿ 18 ವರ್ಷ, ಗರಿಷ್ಠ 28 ವರ್ಷ ಮೀರಿರಬಾರದು.
SC/ST/OBC/PWBD ಇತ್ಯಾದಿ ವರ್ಗಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನಿಯಮಗಳು ಭಾರತದ ಮಾರ್ಗಸೂಚಿಗಳು ಅನ್ವಯವಾಗುತ್ತವೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ-5 ವರ್ಷ, ಇತರೆ ಹಿಂದುಳಿದ ವರ್ಗಗಳು – 8 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆಯ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್‌ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಸ್ಟೈಫಂಡ್‌ ವಿವರ: ಗ್ರಾಮೀಣ/ಅರೆ-ನಗರ ಶಾಖೆಗಳು-ರೂ.15,000
ನಗರ ಶಾಖೆಗಳು-ರೂ.15,000
ಮೆಟ್ರೋ ಶಾಖೆಗಳು-ರೂ.15,000
ಅಪ್ರೆಂಟಿಸ್‌ಗಳು ಯಾವುದೇ ಇತರ ಭತ್ಯೆಗಳು/ಸವಲತ್ತುಗಳಿಗೆ ಅರ್ಹರಾಗಿರುವುದಿಲ್ಲ.

ಅರ್ಜಿ ಶುಲ್ಕ: PwBD ಅಭ್ಯರ್ಥಿಗಳಿಗೆ ರೂ.400/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಎಲ್ಲಾ ಮಹಿಳಾ ಅಭ್ಯರ್ಥಿಗಳು/EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.600 ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಇತರೆ ಅಭ್ಯರ್ಥಿಗಳಿಗೆ ರೂ. 800 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ www.nats.education.gov.in ನಲ್ಲಿ ಅಪ್ರೆಂಟ್ಶಿಪ್‌ ಪೋರ್ಟಲ್‌ಗೆ ಭೇಟಿ ನೀಡಬೇಕು.
ಅನಂತರ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಪ್ರೆಂಟಿಶಿಪ್‌ ನ ಆನ್‌ಲೈನ್‌ ಅರ್ಜಿಯ ಲಿಂಕ್‌ ಕ್ಲಿಕ್‌ ಮಾಡಿ
ಅಭ್ಯರ್ಥಿಗಳು ಮೊದಲು ಅಪ್ರೆಂಟಿಶಿಪ್‌ ಪೋರ್ಟಲ್‌ಗೆ ಲಾಗಿನ್‌ ಆಗಬೇಕು.
ಅಲ್ಲಿ ನೀವು ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸುವುದಕ್ಕೆ ನ್ಯಾವಿಗೇಟ್‌ ಮಾಡಿ
ನಂತರ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಪ್ರೆಂಟಿಶಿಪ್‌ ಬಟನ್‌ ಕ್ಲಿಕ್‌ ಮಾಡಬೇಕು. ನಂತರ ಆಕ್ಷನ್‌ ಕಾಲಮ್‌ನಲ್ಲಿ ಅಪ್ಲೈ ಬಟನ್‌ ಇರುತ್ತದೆ. ಅದನ್ನು ಆಯ್ಕೆ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ