SECL Apprentice Recruitment 2024: ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಗ್ರಾಜುಯೇಟ್ ಹಾಗೂ ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 1425 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಡಿಪ್ಲೋಮಾ, ಬಿಇ ಆದವರು ಅರ್ಜಿ ಸಲ್ಲಿಸಬಹುದು
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-02-2024 ರ ರಾತ್ರಿ 12 ಗಂಟೆಯವರೆಗೆ
ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ.
ಗ್ರಾಜುಯೇಟ್ ಇನ್ ಮೈನಿಂಗ್ ಇಂಜಿನಿಯರಿಂಗ್-200 ಹುದ್ದೆಗಳು ಖಾಲಿ ಇದೆ
ಗ್ರಾಜುಯೇಟ್ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್-50 ಹುದೆಗಳು ಖಾಲಿ ಇದೆ.
ಗ್ರಾಜುಯೇಟ್‌ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್-30
ಗ್ರಾಜುಯೇಟ್ ಇನ್ ಸಿವಿಲ್ ಇಂಜಿನಿಯರಿಂಗ್-30
ಗ್ರಾಜುಯೇಟ್ ಇನ್ ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯುನಿಕೇಷನ್-20
ಟೆಕ್ನೀಷಿಯನ್ ಇನ್ ಮೈನಿಂಗ್ ಇಂಜಿನಿಯರಿಂಗ್ ಮೈನಿಂಗ್ ಅಂಡ್ ಮೈನ್ ಸರ್ವೇಯಿಂಗ್-900
ಟೆಕ್ನೀಷಿಯನ್ ಅಪ್ರೆಂಟಿಸ್ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್-50 ಹುದ್ದೆಗಳು
ಟೆಕ್ನಿಷಿಯನ್ ಅಪ್ರೆಂಟಿಸ್ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್-75
ಟೆಕ್ನೀಷಿಯನ್ ಅಪ್ರೆಂಟಿಸ್ ಇನ್ ಸಿವಿಲ್ ಇಂಜಿನಿಯರಿಂಗ್-50
ವಿದ್ಯಾರ್ಹತೆ: ಈ ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಮಾಡರಬೇಕು. ಟೆಕ್ನಿಷಿಯನ್ ಹುದ್ದೆಗಳಿಗೆ ಡಿಪ್ಲೋಮಾ ಇನ್ ಇಂಜಿನಿಯರಿಂಗ್ ಪಾಸ್ ಮಾಡಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿ ಈ ಹುದ್ದೆಗಳಿಗೆ ಮಾಡುವಂತಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಇತರೆ ಯಾವುದೇ ಮಾಧ್ಯಮದ ಮೂಲಕ ಅಂದರೆ ಅಂಚೆ, ಕೊರಿಯರ್, ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶವ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಸಂಸ್ಥೆಯು ನೀಡಿದ ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು. ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಡಿಪ್ಲೋಮಾ ಶಿಕ್ಷಣ ಅಂಕಗಳು, ಇಂಜಿನಿಯರಿಂಗ್ ಶಿಕ್ಷಣ ಅಂಕಗಳು, ಇತರೆ ಮಾಹಿತಿಗಳನ್ನು ಮೊದಲೇ ರೆಡಿ ಮಾಡಿ ಇಡಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
ಮೇಲೆ ನೀಡಲಾದ ಲಿಂಕ್ ಕ್ಲಿಕ್ ಮಾಡಿ ಅಭ್ಯರ್ತೀಗಳು ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ ವೆಬ್‌ಸೈಟ್‌ಗೆ ಭೇಟಿ ನೀಡೇಕು. ಅಲ್ಲಿ Login/Enroll ಎಂದಿರುವಲ್ಲಿ ಕ್ಲಿಕ್ ಮಾಡಿ, ರಿಜಿಸ್ಟ್ರೇಷನ್ ಪಡೆಯಬೇಕು. ನಂತರ ಅರ್ಜಿ ಸಲ್ಲಿಸಬೇಕು.