CSB Recruitment 2024: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ; ಅರ್ಜಿ ಆಹ್ವಾನ

Advertisements

CSB Recruitment 2024: ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 122 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಿಎಸ್‌ಬಿ ಯಲ್ಲಿ ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಯ ಮಾನದಂಡಗಳನ್ನು ಪೂರೈಸುವವರು, ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದು.

ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುವವರು ಈ ಉದ್ಯೋಗದ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಕೇಂದ್ರ ಸರಕಾರದ ಉದ್ಯೋಗ ಹುಡುಕುವವರಿಗೆ ಇದೊಂದು ಸುವರ್ಣಾವಕಾಶ. ಈ ಹುದ್ದೆಗೆ 31-Mar-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-02-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2024

ಹುದ್ದೆಗಳ ವಿವರ:
ಹುದ್ದೆ ಹೆಸರು: ಸೈಂಟಿಸ್ಟ್‌ ಬಿ ಹುದ್ದೆಗೆ ಅರ್ಜಿಗಳನ್ನು ಸೆಂಟ್ರಲ್ ಸಿಲ್ಕ್‌ ಬೋರ್ಡ್‌ ‌ಸಂಸ್ಥೆ ಅರ್ಜಿಯನ್ನು ಆಹ್ವಾನಿಸಿದೆ.
ಹುದ್ದೆ ಸಂಖ್ಯೆ: ಒಟ್ಟು 122 ಹುದ್ದೆಗಳು ಖಾಲಿ ಇದೆ.

ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100-ರೂ.1,77,500/- ವೇತನ ದೊರಕಲಿದೆ.

ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ವಿಜ್ಞಾನ/ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯೋಮಿತಿ 35 ವರ್ಷ ಮೀರಿರಬಾರದು. ಸಂಸ್ಥೆಯ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ