ಚಾಮರಾಜನಗರ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 70 ಅಂಗನವಾಡಿ ಕಾರ್ಯಕರ್ತೆ ಹಾಗೂ 153 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ತೇರ್ಗಡೆ ಹಾಗೂ ಗರಿಷ್ಠ ವಿದ್ಯಾರ್ಹತೆ 9 ನೇ ತರಗತಿ ತೇರ್ಗಡೆಯಾಗಿರಬೇಕು.
ಅರ್ಹ ಅಭ್ಯರ್ಥಿಗಳು ಎಲ್ಲಾ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 26-04-2021 ಬೆಳಗ್ಗೆ 10.00ಗಂಟೆ ಯಿಂದ 25-05-2021 ರ ಸಂಜೆ 5.30 ಗಂಟೆಯೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :26-04-2021 ಬೆಳಗ್ಗೆ 10.00 ಗಂಟೆಯಿಂದ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-05-2021 ಸಂಜೆ 5.30 ರವರೆಗೆ
ಆನ್‌ಲೈನ್‌ನಲ್ಲಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆ : 26-05-2021 ರಿಂದ 31-05-2021 ರವರೆಗೆ
ಅರ್ಹರಾದ ಅಭ್ಯರ್ಥಿಗಳ ಪಟ್ಟಿಗೆ ಆಯ್ಕೆ ಸಮಿತಿಯಿಂದ ಅನುಮೋದನೆ ಪಡೆಯುವುದು : 01-06-2021 ರಿಂದ 03-06-2021 ರವರೆಗೆ
ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಣೆ ಹಾಗೂ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸುವಿಕೆಗೆ ಕಾಲಾವಕಾಶ : 04-06-2021 ರಿಂದ 11-06-2021ರವರೆಗೆ
ಆಕ್ಷೇಪಣೆ ಬಂದ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ : 14-06-2021 ರಿಂದ 21-06-2021 ರವರೆಗೆ
ಪರಿಶೀಲನೆ ನಂತರ ಆಯ್ಕೆ ಸಮಿತಿಯ ಸಭೆ ನಡೆಸಿ,ಅಂತಿಮ ಆಯ್ಕೆ ಪಟ್ಟಿಗೆ ಅನುಮೋದನೆ ಪಡೆಯಲು ಕಾಲಾವಕಾಶ : 22-06-2021 ರಿಂದ 24-06-2021 ರವರೆಗೆ
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ