ಚಿಕ್ಕಬಳ್ಳಾಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 6 ಶಿಶು ಅಭಿವೃದ್ಧಿ ಯೋಜನೆಯಡಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 21,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-04-2021 ಸಂಜೆ 5.30 ಗಂಟೆಗೆ
ಅರ್ಜಿ ಶುಲ್ಕ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಹುದ್ದೆಗಳ ವಿವರ:
8 ಮಿನಿ ಅಂಗನವಾಡಿ ಕಾರ್ಯಕರ್ತೆ, 9 ಅಂಗನವಾಡಿ ಕಾರ್ಯಕರ್ತೆ, 73 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಆಗಲು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಕಾರ್ಯಕರ್ತೆ ಆಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9 ತರಗತಿ ತೇರ್ಗಡೆ ಆಗಿರಬೇಕು.
ವಯೋಮಿತಿ: 18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.
ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ