CISF Recruitment 2024: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಹುದ್ದೆಗಳಿದ್ದು ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಗ್ರೇಡ್ ಅಥವಾ ಐದು ವರ್ಷಗಳ ಮೂಲ ತರಬೇತಿಯ ಅವಧಿಯನ್ನು ಒಳಗೊಂಡಂತೆ 5 ವರ್ಷಗಳ ನಿಯಮಿತ ಸೇವೆಯನ್ನು ಪೂರ್ಣಗೊಳಿಸಿದ ಹೆಡ್ ಕಾನ್ಸ್‌ಟೇಬಲ್/ಜಿಡಿ, ಕಾನ್‌ಸ್ಟೆಬಲ್/ಜಿಡಿ ಮತ್ತು ಕಾನ್‌ಸ್ಟೆಬಲ್/ಟ್ರೇಡ್ಸ್‌ಮೆನ್ ಮೂಲ ತರಬೇತಿಯ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಹಾಗೂ ಸೀಮಿತ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
CISF ನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) 836 ಖಾಲಿ ಹುದ್ದೆಗಳನ್ನು (UR-649, SC- 125 ಮತ್ತು ST-62) ಭರ್ತಿ ಮಾಡಲು ಅರ್ಹ ಇಲಾಖಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರೀಯ ಕೈಗಾರಿಕಾ ಪಡೆ ಸೀಮಿತ ಇಲಾಖೆಯಲ್ಲಿ ಎಎಸ್‌ಐ ಹುದ್ದೆಗೆ 836 ಸ್ಥಾನಗಳಿವೆ. UR-649, SC- 125 ಮತ್ತು ST-62 ಹುದ್ದೆ ಮೀಸಲಿಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-02-2024. CISF ನೇಮಕಾತಿ ಅರ್ಜಿ 2024 ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕಕ್ಕೆ ಮೊದಲು ಅರ್ಜಿ ಶುಲ್ಕವನ್ನು ಪಾವತಿಸುವುದು ಬಹಳ ಮುಖ್ಯ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲನೆ ಮಾಡಬಹುದು
ವಯೋಮಿತಿ: ಮೇಲೆ ತಿಳಿಸಿದ ಹುದ್ದೆಗಳಿಗೆ ಅಭ್ಯರ್ಥಿಗಳ ವಯೋಮಿತಿಯು 25 ವರ್ಷ ಮೀರಿರಬಾರದು. SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. OBC ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿ ಸಡಿಲಿಕೆ ಅನ್ವಯಿಸುವುದಿಲ್ಲ ಏಕೆಂದರೆ OBC ವರ್ಗಕ್ಕೆ ಯಾವುದೇ ಹುದ್ದೆಯನ್ನು ಕಾಯ್ದಿರಿಸಲಾಗಿಲ್ಲ, OBC ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳಾಗಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.
ಅರ್ಜಿ ಸಲ್ಲಿಸುವುದು ಹೇಗೆ-
ಅಭ್ಯರ್ಥಿಗಳು CISF ವೆಬ್‌ಸೈಟ್‌ಗೆ ಭೇಟಿ ನೀಡಿ, ಆನ್‌ಲೈನ್‌ನಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.