CSB Recruitment 2024: ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 122 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಸೈಂಟಿಸ್ಟ್-ಬಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುತ್ತಿದ್ದು, ಹೆಚ್ಚಿನ ವಿವರ ಇಲ್ಲಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 11-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11-04-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-05-2024
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 11-05-2024
ಅರ್ಜಿ ನಮೂನೆಯ ವಿವರಗಳಲ್ಲಿ ತಿದ್ದುಪಡಿಯ ದಿನಾಂಕ: 13 ರಿಂದ 15 ನೇ ಮೇ 2024
ಪರೀಕ್ಷೆಯ ದಿನಾಂಕಗಳು: 29-ಜೂನ್-2024
ಹುದ್ದೆಯ ಕುರಿತ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಸಂಸ್ಥೆಯಲ್ಲಿ ಸೈಂಟಿಸ್ಟ್ ಬಿ ಹುದ್ದೆಗಳ ಭರ್ತಿ ಮಾಡಲಾಗುತ್ತಿದ್ದು, ಒಟ್ಟು 122 ಸಂಖ್ಯೆ ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100-177500/- ವೇತನ ಸಿಗಲಿದೆ.
ವಿದ್ಯಾರ್ಹತೆ: CSB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ವಿಜ್ಞಾನ/ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಸೆಂಟ್ರಲ್ ಸಿಲ್ಕ್ ಬೋರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯೋಮಿತಿಯು ಈ ಹುದ್ದೆಗೆ 35 ವರ್ಷ ಗರಿಷ್ಠ ಮಿತಿಯನ್ನು ಮೀರಿರಬಾರದು. ಕೇಂದ್ರ ರೇಷ್ಮೆ ಮಂಡಳಿಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.
ಅರ್ಜಿ ಶುಲ್ಕ:
SC/ST/PwBD/ತೃತೀಯ ಲಿಂಗ ಅಭ್ಯರ್ಥಿಗಳಿಗೆ ರೂ.975/-, OBC (NCL)/UPS/EWS ಅಭ್ಯರ್ಥಿಗಳಿಗೆ ರೂ.1800/-, ಸಾಮಾನ್ಯ/UR ಅಭ್ಯರ್ಥಿಗಳಿಗೆ ರೂ.1900/-, ಅರ್ಜಿ ಶುಲ್ಕ ಪಾವತಿ ಮಾಡಬೇಕು. ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಈ ಮೇಲ್ಕಂಡ ಹುದ್ದೆಗೆ ಆಯ್ಕೆ ಮಾಡಲಾಗುವುದು.