ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ಜವಾನ( Peon) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ : 34 ಹುದ್ದೆಗಳು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 19-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-05-2021(11.59 ರಾತ್ರಿ)
ವಿದ್ಯಾರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕನ್ನಡ ಓದಲು ಬರೆಯಲು ತಿಳಿದಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವಯೋಮಿತಿಯವರಾಗಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ-I ರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ಧೃಢೀಕರಣ ಪತ್ರ ಹೊಂದಿದ್ದಲ್ಲಿ ಗರಿಷ್ಠ 40 ವರ್ಷ.
ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಾಧಿಕಾರ ನೀಡುವ ಜಾತಿ ಪ್ರಮಾಣ ಪತ್ರ ಹೊಂದಿದ್ದಲ್ಲಿ ಗರಿಷ್ಠ 38 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.
ಅರ್ಜಿ ಶುಲ್ಕ : ಸಾಮಾನ್ಯ ವರ್ಗ, 2ಎ, 2 ಬಿ, 3 ಎ, 3 ಬಿ ಸೇರಿದ ಅಭ್ಯರ್ಥಿಗಳಿಗೆ ರೂ. 200/-, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1 ಹಾಗೂ ಎಲ್ಲಾ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಆನ್ಲೈನ್ ಹೊರತು ಪಡಿಸಿ ಬೇರೆ ಯಾವುದೇ ಬೇರೆ ಯಾವುದೇ ವಿಧಾನದಲ್ಲಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ