ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯಡಿ ತೆರವಾಗಿರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಸಲ್ಲಿಸಿದ ದಾಖಲಾತಿಗಳನ್ನು ಮಾತ್ರ ಪರಿಗಣಿಸಲಾಗುವುದು. ತದನಂತರ ದಾಖಲಾತಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 09-07-2021 ಬೆಳಿಗ್ಗೆ 10.00 ಗಂಟೆಯಿಂದ
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-08-2021 ಸಂಜೆ 5.30 ಗಂಟೆಯವರೆಗೆ
ಹುದ್ದೆ : ಅಂಗನವಾಡಿ ಕಾರ್ಯಕರ್ತೆ – 52 ಹುದ್ದೆಗಳು
ಅಂಗನವಾಡಿ ಸಹಾಯಕಿ : 21 ಹುದ್ದೆಗಳು
ವೇತನ : ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ರೂ.10,000/-ರಂತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ರೂ.5000/- ರಂತೆ ಗೌರವಧನ ನೆಲೆಯಲ್ಲಿ ಭರ್ತಿ ಮಾಡಲಾಗುತ್ತಿದೆ.
ವಯೋಮಿತಿ : ಅಭ್ಯರ್ಥಿಯ ವಯಸ್ಸು 18-35 ವರ್ಷದೊಳಗಿನವರಾಗಿರಬೇಕು. ( ಕಾರ್ಯಕರ್ತೆಯರ ಹುದ್ದೆಗಳಿಗೆ ಮಾತ್ರ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ಅಂದರೆ ಗರಿಷ್ಠ 45 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ)
ಅರ್ಹ ಮಹಿಳಾ ಅಭ್ಯರ್ಥಿಗಳು ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.