ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆ ಮತ್ತು 63 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 08-04-2021
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 07-05-2021 ಸಂಜೆ 5.30 ಗಂಟೆ
ವಯೋಮಿತಿ : 18 ರಿಂದ 35 ವರ್ಷದೊಳಗಿನ ಸಾಮಾನ್ಯ ವರ್ಗದವರು ಮತ್ತು ಕಾರ್ಯಕರ್ತೆಯರ ನೇಮಕಾತಿಗೆ 18 ರಿಂದ 45 ವರ್ಷದೊಳಗಿನ ವಿಕಲಚೇತನ ವರ್ಗದ ಅರ್ಹ ಸ್ಥಳೀಯ ( ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯಾಗಲು ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9 ನೇ ತರಗತಿ ತೇರ್ಗಡೆ.
ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ಅಲ್ಲಿ ಮಾಹಿತಿಗಳನ್ನು ಓದಿ, ಅಧಿಕೃತ ದಾಖಲೆಗಳೊಂದಿಗೆ ಸಂಬಂಧಿತರು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 07-05-2021 ರ ಸಂಜೆ 5.30 ಗಂಟೆಯೊಳಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ