DFCCIL : 1072 ಹುದ್ದೆ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಷನ್ ಆಪ್ ಇಂಡಿಯಾ ಲಿಮಿಟೆಡ್ (ಡಿಎಫ್ ಸಿಸಿಐಎಲ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 23, ಮೇ, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-05-2021
ಅರ್ಜಿ ಶುಲ್ಕ: ಡಿಮಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಹುದ್ದೆ : ಎಕ್ಸಿಕ್ಯುಟಿವ್, ಮ್ಯಾನೇಜರ್

ಹುದ್ದೆ ಸಂಖ್ಯೆ : 1072

ಹುದ್ದೆ ಸ್ಥಳ : ಭಾರತದೆಲ್ಲೆಡೆ

ವೇತನ : ಈ ಹುದ್ದೆಗಳಿಗೆ ಆಯ್ ಅಭ್ಯರ್ಥಿಗಳಿಗೆ ಮಾಸಿಕ ರೂ.25,000/- ರಿಂದ ರೂ. 1,60,000/- ವೇತನವಿರುತ್ತದೆ.

ವಿದ್ಯಾರ್ಹತೆ : ಎಕ್ಸಿಕ್ಯುಟಿವ್ ಹುದ್ದೆಗೆ ಡಿಪ್ಲೋಮಾ ಮತ್ತು ಗ್ರಾಜ್ಯುಯೇಶನ್ ಮಾಡಿರಬೇಕು. ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗೆ ಹತ್ತನೇ ತರಗತಿ ಪಾಸಾಗಿರಬೇಕು.ಜ್ಯೂನಿಯರ್ ಮ್ಯಾನೇಜರ್ ಹುದ್ದೆಗೆ ಬ್ಯಾಚುಲರ್ ಡಿಗ್ರಿ, ಎಂಬಿಎ/ಪಿಜಿಡಿಬಿಎ/ಪಿಜಿಡಿಬಿಎಂ/ಪಿಜಿಡಿಎಂ ನ್ನು ತೇರ್ಗಡೆ ಹೊಂದಿರಬೇಕು.

ಎಕ್ಸಿಕ್ಯುಟಿವ್ – 442 ಹುದ್ದೆಗಳು
ಜ್ಯೂನಿಯರ್ ಎಕ್ಸಿಕ್ಯುಟಿವ್-519
ಜ್ಯೂನಿಯರ್ ಮ್ಯಾನೇಜರ್ -113

ವಯೋಮಿತಿ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಠ 27 ವರ್ಷ ವಯೋಮಿತಿ ಇರಬೇಕು.

ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. ಜ್ಯೂನಿಯರ್ ಮ್ಯಾನೇಜರ್ ಹುದ್ದೆಗೆ ರೂ‌.1000/-, ಎಕ್ಸಿಕ್ಯುಟಿವ್ ಹುದ್ದೆಗೆ ರೂ.900/-, ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗೆ ರೂ. 700/-, ಅರ್ಜಿ ಶುಲ್ಕ ಪಾವತಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಯುಬಿಡಿ/ ಎಕ್ಸ್ ಸರ್ವಿಸ್ ಮ್ಯಾನ್ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

ನೋಟಿಫಿಕೇಶನ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Comment