ಡೆಡಿಕೇಟೆಡ್ ಫ್ರೈಟ್ ಕೋರಿಡಾರ್ ಕಾರ್ಪೋರೇಷನ್ ಆಫ್ ಇಂಡಿಯಾ (ಡಿಎಫ್ ಸಿಸಿಐಎಲ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್, 15 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 02-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2021
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ : ಅಭ್ಯರ್ಥಿಗಳ ವಯೋಮಿತಿ ಯು ಗರಿಷ್ಠ 55 ಕ್ಕಿಂತ ಮೀರಿರಬಾರದು.
ಡಿಎಫ್ ಸಿಸಿಐಎಲ್ ನಲ್ಲಿ ಜ್ಯೂನಿಯರ್ ಮ್ಯಾನೇಜರ್ ಹಾಗೂ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : ಜ್ಯೂನಿಯರ್ ಮ್ಯಾನೇಜರ್ 124,ಎಕ್ಸಿಕ್ಯುಟಿವ್ 454,ಜ್ಯೂನಿಯರ್ ಎಕ್ಸಿಕ್ಯುಟಿವ್ 521 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ : ಡಿಎಫ್ ಸಿಸಿಐಎಲ್ ನ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.
ವೇತನ: ಜ್ಯೂನಿಯರ್ ಮ್ಯಾನೇಜರ್ – ರೂ.50,000/- ರಿಂದ ರೂ. 1,60,000/-
ಎಕ್ಸಿಕ್ಯುಟಿವ್ – ರೂ.30,000- ರಿಂದ ರೂ. 1,20,000/-
ಜ್ಯೂನಿಯರ್ ಎಕ್ಸಿಕ್ಯುಟಿವ್ -ರೂ.25,000/- ರಿಂದ ರೂ.68,000/-
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಒಟ್ಟು ಹುದ್ದೆ : 1099
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ 15-04-2021 ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
Jt. General Manager/ HR, Dedicated Freight Corridor Corporation of India Ltd. (DFCCIL) , 5th Floor, Supreme Court Metro Station Building Complex, New Delhi-110001
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ