Advertisements
ಧಾರವಾಡ ಜಿಲ್ಲಾ ಆಸ್ಪತ್ರೆಗೆ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವುದಕ್ಕಾಗಿ ಹಲವು ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ.
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆ : ಶ್ರುಶ್ರೂಷಕರು : 30 ಹುದ್ದೆಗಳು.
ಫಾರ್ಮಸಿಸ್ಟ್ : 3 ಹುದ್ದೆ.
ಡಿ.ವರ್ಗ ನೌಕರರು : 30 ಹುದ್ದೆಗಳು
ಭದ್ರತಾ ಸಿಬ್ಬಂದಿ : 15 ಹುದ್ದೆ
ಕಂಪ್ಯೂಟರ್ ಅಪರೇಟರ್ : 2 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : 80
ವಯೋಮಿತಿ : 18 ವರ್ಷದಿಂದ ಗರಿಷ್ಠ 40 ವರ್ಷ ವಯೋಮಿತಿಯವರು ಅರ್ಜಿಯನ್ನು ಸಲ್ಲಿಸಬಹುದು.
ನೇಮಕಾತಿ ನಿಯಮಾನುಸಾರ ವೇತನ ನಿಗದಿಪಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಲಗತ್ತಿಸಿ ಮೇ 4 ಮತ್ತು ಮೇ 5, 2021ರಂದು ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 4.30 ಗಂಟೆಯವರೆಗೆ ಧಾರವಾಡ ಜಿಲ್ಲಾ ಆಸ್ಪತ್ರೆಯ ಸಭಾಭವನದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.