ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐಸಿಯು ಬೆಡ್ ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲವನ್ನು ದಿನಾಂಕ 30-09-2021 ರವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ / ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಂಡಿದ್ದು, ಆಸಕ್ತರು ದಿನಾಂಕ 22-05-2021 ರಂದು ಬೆಳಿಗ್ಗೆ 11-00 ಗಂಟೆಯಿಂದ ಮಧ್ಯಾಹ್ನ 2-00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಹುದ್ದೆ : ವೈದ್ಯಾಧಿಕಾರಿಗಳು
ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ಅಂಕ ಪಟ್ಟಿಗಳು, ಎಲ್ಲಾ ಪ್ರಮಾಣ ಪತ್ರಗಳು, ವಿಳಾಸ ಪುರಾವೆ ಮತ್ತು ಗುರುತಿನ ಪುರಾವೆಗಳೊಂದಿಗೆ ಹಾಗೂ ಸದರಿ ದಾಖಲೆಗಳ 02 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಮೇಲೆ ತಿಳಿಸಿರುವ ದಿನಾಂಕದಂದು ನಿಗದಿತ ಸಮಯದೊಳಗೆ ಸಂದರ್ಶನಕ್ಕೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗಾಗಿ 08232-224027 ಇಲ್ಲಿ ಸಂಪರ್ಕಿಸಬಹುದು.