ಮಾನ್ಯ ಜಿಲ್ಲಾಧಿಕಾರಿಗಳ ಅನುಮೋದನೆ ಮೇರೆಗೆ ಮೈಸೂರು ಜಿಲ್ಲೆಯಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ಸೋಂಕಿತ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾಕೇರ್ ಆಸ್ಪತ್ರೆ ಮತ್ತು ಪಿಕೆಟಿಬಿ ಹಾಗೂ ಸಿಡಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ನೀಡಲು ಸದರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ ವೈದ್ಯರ ಅಗತ್ಯತೆ ಇರುವುದರಿಂದ ತಾತ್ಕಾಲಿಕವಾಗಿ 03 ರಿಂದ 06 ತಿಂಗಳ ಅವಧಿಗೆ ಅಥವಾ ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ (ಯಾವುದು ಮೊದಲೋ ಅಲ್ಲಿಯವರೆಗೆ) ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ನೇರ ಸಂದರ್ಶನದ ಮೂಲಕ ನೇಮಕಾತಿ ಪ್ರಕ್ರಿಯೆಯನ್ನು ಕೆಳಕಂಡಂತೆ ನಿರ್ದೇಶಕರು ಮತ್ತು ಡೀನ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಮೈಸೂರು ಈ ಕಚೇರಿಯಲ್ಲಿ ಹಮ್ಮಿಕೊಂಡಿದ್ದು, ಆಸಕ್ತರು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಹುದ್ದೆ : ಸೀನಿಯರ್ ರೆಸಿಡೆಂಟ್ಸ್ ( ಮೆಡಿಸಿನ್ )
ಸೀನಿಯರ್ ರೆಸಿಡೆಂಟ್ಸ್ ( ಪ್ಲುಮೋ)
ಸೀನಿಯರ್ ರೆಸಿಡೆಂಟ್ಸ್ ( ಅನಸ್ತೇಶಿಯ)
ಜ್ಯೂನಿಯರ್ ರೆಸಿಡೆಂಟ್ಸ್
ನರ್ಸಿಂಗ್ ಆಫೀಸರ್ಸ್
ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಸಂದರ್ಶನದ ಮೇಲೆ ಮೂಲ ದಾಖಲೆಗಳನ್ನು ಮತ್ತು ಛಾಯಾ ಪ್ರತಿಗಳನ್ನು ಸಲ್ಲಿಸುವುದು.
ಈ ನೇಮಕಾತಿಯು ತಾತ್ಕಾಲಿಕವಾಗಿದ್ದು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಖಾಯಂ ನೌಕರಿಯಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0821-2520512 ಗೆ ಸಂಪರ್ಕಿಸಿ.