ಡಿಎಸ್ ಆರ್ ವಿಎಸ್ (ಡಿಜಿಟಲ್ ವಿಕಾಸ್ ಆಂಡ್ ರೋಜಗಾರ್ ವಿಕಾಸ್ ಸಂಸ್ಥಾನ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 15 , ಎಪ್ರಿಲ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-04-2021
ಅರ್ಜಿ ಶುಲ್ಕ: ಆನ್ಲೈನ್ ಮೂಲಕ ಸಲ್ಲಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ ರೂ.350/- ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.
ಹುದ್ದೆ: ಬ್ಲಾಕ್ ಪ್ರೊಗ್ರಾಮ್ ಸುಪರ್ ವೈಸರ್
ಹುದ್ದೆ ಸಂಖ್ಯೆ : 138
ವಿದ್ಯಾರ್ಹತೆ : ಅಭ್ಯರ್ಥಿಗಳು ಗ್ರಾಜ್ಯುಯೇಟ್ ನ್ನು ಅಂಗೀಕೃತ ಸಂಸ್ಥೆ/ಬೋರ್ಡ್ ನಿಂದ ಉತ್ತೀರ್ಣಗೊಂಡಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 32 ವಯೋಮಿತಿ ಹೊಂದಿರಬೇಕು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಸಂಸ್ಥೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 15 ಎಪ್ರಿಲ್, 2021 ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ