MTS Recruitment: 10th ಪಾಸಾದವರಿಗೆ ಸಿಹಿ ಸುದ್ದಿ, ಎಂಟಿಎಸ್‌ನಲ್ಲಿ ಉದ್ಯೋಗಾವಕಾಶ; ಮಾಸಿಕ ರೂ.50 ಸಾವಿರಕ್ಕಿಂತಲೂ ಹೆಚ್ಚಿನ ಸಂಬಳ

Advertisements

MTS Recruitment: 10ನೇ ತರಗತಿ ಪಾಸಾದ ಯುವಕರಿಗೆ ಸಿಹಿ ಸುದ್ದಿ. ದೆಹಲಿ ಸಿವಿಲ್ ಸರ್ವೀಸಸ್ ಸೆಲೆಕ್ಷನ್ ಬೋರ್ಡ್ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗೆ ನೀಡಲಾದ ಹುದ್ದೆಯ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಮಾರ್ಚ್ 8,2024 ರವರೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-03-2024

ಹುದ್ದೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ;
ಹುದ್ದೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ತರಬೇತಿ ಮತ್ತು ತಾಂತ್ರಿಕ ಶಿಕ್ಷಣ, ಪ್ರಧಾನ ಖಾತೆಗಳು, ವಿಧಾನಸಭೆಯ ಕಚೇರಿ, ಮುಖ್ಯ ಚುನಾವಣಾಧಿಕಾರಿಗಳ ಸಚಿವಾಲಯ, ಡಿಎಸ್‌ಎಸ್‌ಎಸ್‌ಬಿ, ಅರ್ಥಶಾಸ್ತ್ರ ನಿರ್ದೇಶನಾಲಯ ಸೇರಿದಂತೆ ಅಂಕಿಅಂಶ, ಯೋಜನೆ, ತರಬೇತಿ ನಿರ್ದೇಶನಾಲಯಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆ ಸಂಖ್ಯೆ: ಒಟ್ಟು 567 ಎಂಟಿಎಸ್ ಹುದ್ದೆಗಳು ಖಾಲಿ ಇದೆ.

ವಿದ್ಯಾರ್ಹತೆ: ಈ ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತಿಯು 18 ರಿಂದ 27 ವರ್ಷಗಳ ನಡುವೆ ಇರಬೇಕು. ಕೆಲವೊಂದು ಹುದ್ದೆಗಳಿಗೆ 18 ವರ್ಷದಿಂದ 25 ವರ್ಷ ವಯೋಮಿತಿ ಇರಲಿದೆ. ಅರ್ಹತೆ ಮತ್ತು ವಯಸ್ಸಿನ ಮಿತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ವೇತನ: ಈ ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18000-ರೂ.56900 ವೇತನ ನೀಡಲಾಗುವುದು.

ಅರ್ಜಿ ಶುಲ್ಕ: ಮಹಿಳೆಯರು, ಎಸ್‌ಸಿ ಮತ್ತು ಎಸ್‌ಟಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಉಳಿದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಸೂಚಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಶ್ರೇಣಿ 1 ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಪರೀಕ್ಷೆಯು ಆನ್‌ಲೈನ್ ಮೂಲಕ ನಡೆಯುತ್ತದೆ. ಆಯ್ಕೆ ಮಂಡಳಿಯು ಪರೀಕ್ಷೆಯ ದಿನಾಂಕವನ್ನು ಮಂಡಳಿಯ ವೆಬ್‌ಸೈಟ್ ಮೂಲಕ ಸೂಕ್ತ ಸಮಯದಲ್ಲಿ ತಿಳಿಸುತ್ತದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರವೇಶ ಕಾರ್ಡ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳಿಗೆ ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ dsssbonline.nic.in ಗೆ ಭೇಟಿ ನೀಡಬೇಕು.
ಎಂಟಿಎಸ್‌ ಸೂಚನೆ ನೀಡಿದ ಅಪ್ಲಿಕೇಶನ್‌ ಲಿಂಕ್‌ನ್ನು ಕ್ಲಿಕ್‌ ಮಾಡಿ
ಅನಂತರ ಅಭ್ಯರ್ಥಿಗಳು ಅಲ್ಲಿ ಕೇಳಿದ ವಿವರಗಳನ್ನು ಭರ್ತಿ ಮಾಡಿ, ಸೂಕ್ತ ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು.
ಅನಂತರ ಶುಲ್ಕವನ್ನು ಪಾವತಿಸಬೇಕು, ಕೊನೆಗೆ ಸಲ್ಲಿಸು ಬಟನ್‌ ಅನ್ನು ಕ್ಲಿಕ್‌ ಮಾಡಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್ dsssbonline.nic.in ಗೆ ಭೇಟಿ ನೀಡಿ ವಿವರಗಳನ್ನು ಪಡೆದುಕೊಳ್ಳಬಹುದು.