ECIL Recruitment 2024: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 10 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಕ್ಸಿಕ್ಯುಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹಾಗಾಗಿ ಆಸಕ್ತ ಅಭ್ಯರ್ಥಿಗಳು 03-ಮೇ-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಪ್ರಮುಖ ದಿನಾಂಕಗಳು;
ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ: 23-04-2024
ನೇರ ಸಂದರ್ಶನದ ದಿನಾಂಕ: 03-05-2024
ಹುದ್ದೆಯ ಕುರಿತ ವಿವರ ಇಲ್ಲಿದೆ;
ಹುದ್ದೆಯ ಸಂಸ್ಥೆ: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ತನ್ನಲ್ಲಿ ಖಾಲಿ ಇರುವ 10 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ರೂ.40000-55000/- ಪ್ರತಿ ತಿಂಗಳು ದೊರೆಯುತ್ತದೆ.
ಶೈಕ್ಷಣಿಕ ಅರ್ಹತೆ: ECIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, MBA, M.Com, PGDM ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 33 ವರ್ಷ ಮೀರಿರಬಾರದು.
OBC ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ವಿಳಾಸ: Electronics Corporation of India Limited, Administrative Building, NFC Road, ECIL Post, Hyderabad – 500062 ಇಲ್ಲಿಗೆ ದಿನಾಂಕ 03-ಮೇ-2024 ರಂದು ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.