EDII Recruitment 2024: ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆಯನ್ನು ಇನ್ನೂ ನಿರ್ದಿಷ್ಟಪಡಿಸಿಲ್ಲ. ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕದಲ್ಲಿ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪೋಸ್ಟಿಂಗ್ ನಡೆಯಲಿದೆ. 02-Jun-2024 ರಂದು ಅಥವಾ ಮೊದಲು ಇಮೇಲ್ ಮೂಲಕ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 25-05-2024
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 02-ಜೂನ್-2024
ಹುದೆಯ ಕುರಿತ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಇಲ್ಲಿ ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.25,000-30,000 ವೇತನ ಸಿಗಲಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಮಾನವ ಸಂಪನ್ಮೂಲ, ವ್ಯವಹಾರ ಆಡಳಿತದಲ್ಲಿ ಪದವಿ ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಗಳು HR ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಒಂದು ವರ್ಷ ಅಥವಾ ಹೆಚ್ಚು ಅನುಭವವನ್ನು ಹೊಂದಿರಬೇಕು.
ವಯೋಮಿತಿ: EDII ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ವಯೋಮಿತಿ ಸಡಿಲಿಕೆ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗವುದು.
ಅರ್ಜಿ ಸಲ್ಲಿಸುವುದು ಹೇಗೆ?
ಮೇಲೆ ತಿಳಿಸಿದ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿಗೆ ಅರ್ಜಿಯನ್ನು ಸಲ್ಲಿಸಬೇಕು. [email protected] ಗೆ 02-Jun-2024 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.