ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ ಕೆಲವು ನಿರ್ದಿಷ್ಟ ಕೌಶಲ್ಯ ಹೊಂದಿದ 6 ವಿಭಾಗದ ಹುದ್ದೆಗಳಿಗೆ ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯದ ಮುಖಾಂತರ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (NSDC)ದಿಂದ ಅಲ್ಪಾವಧಿ ಕೌಶಲ ತರಬೇತಿ ನೀಡಿ, ನಂತರ ಉದ್ಯೋಗವನ್ನೂ ನೀಡಲಾಗುತ್ತಿದೆ.
ಹುದ್ದೆಗಳ ವಿವರ:
- ಎಮೆರ್ಜೆನ್ಸಿ ಮೆಡಿಕಲ್ ಟೆಕ್ನೀಷಿಯನ್ (Emergency Medical Technician)
- ಮೆಡಿಕಲ್ ಎಕ್ವಿಪ್‍ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ (Medical Equipment Technology Assistant)
- ಜನರಲ್ ಡ್ಯೂಟಿ ಅಸಿಸ್ಟೆಂಟ್ (General Duty Assistant)
- ಜನರಲ್ ಡ್ಯೂಟಿ ಅಸಿಸ್ಟೆಂಟ್ ಕ್ರಿಟಿಕಲ್ (General Duty Assistant Critical)
- ಹೋಮ್ ಹೆಲ್ತ್ ಏಡ್ (Home Health Aide)
- ಫ್ಲೆಬೆಟೋಮಿಸ್ಟ್ (Phlebotomist)
ಈ ಮೇಲಿನ ತಂತ್ರಜ್ಞ ಹುದ್ದೆಗಳನ್ನು ಬಯಸುವ ಆಸಕ್ತರಲ್ಲಿ ಆಯ್ದ ಅಭ್ಯರ್ಥಿಗಳಿಗೆ ಆರೋಗ್ಯ ಇಲಾಖೆಯ ಅಧೀನದ ಜಿಲ್ಲಾ ತರಬೇತಿ ಸಂಸ್ಥೆ ಮತ್ತು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ 4 ತಿಂಗಳ ಕಾಲ ತರಬೇತಿ ನೀಡಲಾಗುತ್ತದೆ. ಯಶಸ್ವಿಯಾಗಿ ತರಬೇತಿ ಪೂರೈಸಿದ ಅಭ್ಯರ್ಥಿಗಳನ್ನು ಬೇಡಿಕೆಗೆ ತಕ್ಕಂತೆ ಜಿಲ್ಲಾ ಅಥವಾ ತಾಲೂಕು ಆಸ್ಪತ್ರೆಗಳಲ್ಲಿ ಉದ್ಯೋಗಕ್ಕೆ ಆಯ್ಕೆ ಮಾಡಲಾಗುವುದು.
ವಯೋಮಿತಿ: 18ರಿಂದ 45 ವರ್ಷ
ಮಾಸಿಕ ವೇತನವನ್ನು ವಿದ್ಯಾರ್ಹತೆ ಮತ್ತು ತರಬೇತಿಯನ್ನು ಆಧರಿಸಿ ನಿಗದಿ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸುವ ಕುರಿತು ಒಪ್ಪಿಗೆ ಪತ್ರ ನೀಡಬೇಕಾಗುತ್ತದೆ. ತರಬೇತಿ ಬಳಿಕ ಉದ್ಯೋಗಕ್ಕಾಗಿ ಜಿಲ್ಲಾಸ್ಪತ್ರೆ ಅಥವಾ ತಾಲೂಕು ಆಸ್ಪತ್ರೆಗಳಲ್ಲಿ ನಿಯೋಜಿಸಲಾಗುತ್ತದೆ.
ಆಸಕ್ತರು ಈ ಕೆಳಗಿನ ಗೂಗಲ್ ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬಹುದು.
https://forms.gle/7bVf5WffDSZsqAgv8
ಕೊನೆಯ ದಿನಾಂಕ ಜೂನ್ 15 ಎಂದು ತಿಳಿಸಲಾಗಿದ್ದರೂ, ಅರ್ಜಿ ಸಲ್ಲಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗೆ 9480324002 ಸಂಪರ್ಕಿಸಿ.