EPFO Recruitment 2024: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 62 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸ್ಟೆನೋಗ್ರಾಫರ್ಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 25-ಮೇ-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು;
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 16-05-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-05-2024
ಹುದ್ದೆಗಳ ವಿವರ ಇಲ್ಲಿದೆ;
ಹುದ್ದೆ ಸಂಸ್ಥೆ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ನಲ್ಲಿ ಸ್ಟೆನೋಗ್ರಾಫರ್ಸ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 62 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25,500-ರೂ.81100 ವೇತನ ಸಿಗಲಿದೆ.
ಸ್ಥಳದ ಹೆಸರು ಪೋಸ್ಟ್‌ಗಳ ಸಂಖ್ಯೆ
ಅಹಮದಾಬಾದ್ 3
ಬಾಂದ್ರಾ (ಮುಂಬೈ) 3
ಬೆಂಗಳೂರು 3
ಭೋಪಾಲ್ 1
ಭುವನೇಶ್ವರ 1
ಚಂಡೀಗಢ 1
ಚೆನ್ನೈ 3
ಕೊಯಮತ್ತೂರು 3
ದೆಹಲಿ 18
ಫರಿದಾಬಾದ್ 2
ಗುರುಗ್ರಾಮ 1
ಗುವಾಹಟಿ 3
ಹುಬ್ಬಳ್ಳಿ 1
ಹೈದರಾಬಾದ್ 3
ಜೈಪುರ 2
ಕಾನ್ಪುರ್ 2
ಕೋಲ್ಕತ್ತಾ 3
ಪಾಟ್ನಾ 2
ಪುಣೆ 2
ಥಾಣೆ 2
ತಿರುವನಂತಪುರಂ 1
ಉಜ್ಜಯಿನಿ 1
ವಿಜಯವಾಡ 1
ವಯೋಮಿತಿ ಹಾಗೂ ವಿದ್ಯಾಭ್ಯಾಸ: ಇಪಿಎಫ್‌ಒ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಮತ್ತು ವಿದ್ಯಾಭ್ಯಾಸದ ಅರ್ಹತೆಯು EPFO ನಿಯಮಗಳ ಪ್ರಕಾರ ಇರಬೇಕು. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ