ಇಎಸ್ ಐಸಿ( ಎಂಪ್ಲೋಯಿಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಷನ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇನ್ನು ನಿಗದಿಯಾಗಲಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 02-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಇನ್ನೂ ನಿಗದಿಯಾಗಿಲ್ಲ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಇಎಸ್ ಐಸಿ( ಎಂಪ್ಲೋಯಿಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಷನ್) ನಲ್ಲಿ ಯುಡಿಸಿ, ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಹುದ್ದೆ ಸಂಖ್ಯೆ : ಒಟ್ಟು 6552 ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ವಿವರ : ಯುಡಿಸಿ, ಸ್ಟೆನೋಗ್ರಾಫರ್
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 25,500/- ರಿಂದ ರೂ.81,100/- ವೇತನ ನಿಗದಿಪಡಿಸಲಾಗಿದೆ.
ಅಪ್ಪರ್ ಡಿವಿಶನ್ ವರ್ಕ್ – 6306
ಸ್ಟೆನೋಗ್ರಾಫರ್ – 246
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಡಿಸಿ ಹುದ್ದೆಗೆ ಡಿಗ್ರಿ ತೇರ್ಗಡೆ ಹೊಂದಿರಬೇಕು.
ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12th ತೇರ್ಗಡೆ ಹೊಂದಿರಬೇಕು
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನಿಷ್ಠ 18 ಹಾಗೂ ಗರಿಷ್ಠ 27 ವಯೋಮಿತಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ