ESIC Recruitment 2024: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕೇಂದ್ರ ಲೋಕ ಸೇವಾ ಆಯೋಗವು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 1930 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ನರ್ಸಿಂಗ್ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ ಮಾರ್ಚ್ 27,2024 ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 07-03-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2024
ಹುದ್ದೆಗಳ ವಿವರ ಇಲ್ಲಿದೆ: ನರ್ಸಿಂಗ್ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು 1930 ಹುದ್ದೆಗಳು ಖಾಲಿ ಇದೆ. ವರ್ಗಾವಾರು ಹುದ್ದೆಗಳ ಲಿಸ್ಟ್ ಇಲ್ಲಿ ನೀಡಲಾಗಿದೆ. ಸಾಮಾನ್ಯ ವರ್ಗ-892, EWS-193, OBC-446, SC-235, ST-164 ಹುದ್ದೆ ನೀಡಲಾಗಿದೆ.
ವಿದ್ಯಾರ್ಹತೆ: ಬಿ.ಎಸ್‌ಸಿ (Hons) ನರ್ಸಿಂಗ್/ಬಿ.ಎಸ್.ಸಿ.ನರ್ಸಿಂಗ್/ಪೋಸ್ಟ್ ಬೇಸಿಕ್ ಬಿ.ಎಸ್.ಸಿ.ನರ್ಸಿಂಗ್ ತೇರ್ಗಡೆ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನರ್ಸ್ ಅಥವಾ ನರ್ಸ್ ಸೂಲಗಿತ್ತಿಯಾಗಿ ನೋಂದಾಯಿಸಿಕೊಂಡಿರಬೇಕು ಅಥವಾ ಜನರಲ್ ನರ್ಸಿಂಗ್ ಮಿಡ್ ವೈಫರಿಯಲ್ಲಿ ಡಿಪ್ಲೋಮಾ ಕೋರ್ಸ್ ಮಾಡಿರುವವರಿಗೆ ಆದ್ಯತೆ ನೀಡಲಾಗುವುದು.
ಅನುಭವ: ಒಂದು ವರ್ಷ 50ಹಾಸಿಗೆಗಳ ಆಸ್ಪತ್ರೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವಯೋಮಿತಿ: ನೌಕರರ ರಾಜ್ಯ ವಿಮಾ ನಿಗಮದ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವವರ ಕನಿಷ್ಠ ವಯೋಮಿತಿಯು 18 ವರ್ಷ, ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಶೇಷ ಚೇತನ ವ್ಯಕ್ತಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್ ವರ್ಗದ ಅಭ್ಯರ್ಥಿಗಳಿಗೆ ರೂ.25ನ್ನು ಅರ್ಜಿ ಶುಲ್ಕವಾಗಿ ಪಾವತಿ ಮಾಡಬೇಕು. ಮಹಿಳೆಯರು/ಎಸ್‌ಸಿ/ಎಸ್‌ಟಿ/ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಎರಡು ವರ್ಷ ಪ್ರೊಬೆಷನರಿ ಅವಧಿ ಇರಲಿದ್ದು, ನಂತರ ಹುದ್ದೆಯನ್ನು ಖಾಯಂ ಮಾಡಲಾಗುವುದು.
ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.42,300-ರೂ.63,300 ವೇತನವಿರಲಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ವೆಬ್‌ಸೈಟ್ https://www.upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಬೇರೆ ಯಾವುದೇ ವಿಧಾನದ ಮೂಲಕ ಸ್ವೀಕರಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡುವಾಗ ಭಾವಚಿತ್ರ, ಸಹಿ ಮತ್ತು ಗುರುತಿನ ಪುರಾವೆಗಳನ್ನು ಹೊರತುಪಡಿಸಿ ಯಾವುದೇ ದಾಖಲೆಯನ್ನು ಅಪ್‌ಲೋಡ್ ಮಾಡಬೇಕಾಗಿಲ್ಲ.
ಅಭ್ಯರ್ಥಿಗಳು ತಮ್ಮ ಸರಿಯಾದ ಮತ್ತು ಸಕ್ರಿಯ ಇ-ಮೇಲ್ ವಿಳಾಸಗಳನ್ನು ಆನ್‌ಲೈನ್ ಅಪ್ಲಿಕೇಶನ್‌ನಲ್ಲಿ ಭರ್ತಿ ಮಾಡಬೇಕು. ಏಕೆಂದರೆ ಎಲ್ಲಾ ಪತ್ರವ್ಯವಹಾರಗಳನ್ನು ಇ-ಮೇಲ್ ಮೂಲಕ ಆಯೋಗದ ಮೂಲಕ ಮಾಡಲಾಗುತ್ತದೆ. ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿದ ನಂತರ, ಅಭ್ಯರ್ಥಿಗಳು ಅಂತಿಮವಾಗಿ ಸಲ್ಲಿಸಿದ ಆನ್‌ಲೈನ್ ನೇಮಕಾತಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ