FDA ನೇಮಕ ಅಧಿಸೂಚನೆ ಪಾಲಿಸಲು ಕೆಎಟಿ ಸೂಚನೆ

Advertisements

ರಾಜ್ಯದಾದ್ಯಂತ ವಿವಿಧ ಇಲಾಖೆಗಳ ಕಚೇರಿಗಳಲ್ಲಿ ಖಾಲಿ ಇರುವ FDA,SDA ಹುದ್ದೆಗಳಿಗೆ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು 2018 ನೇ ಸಾಲಿನಿಂದಲೂ ನೇಮಕ ಆದೇಶಕ್ಕೆ ಕಾಯುತ್ತಿದ್ದಾರೆ. ನೇಮಕ ಪ್ರಕ್ರಿಯೆಗೆ ಹೊರಡಿಸಿ ನೋಟಿಫಿಕೇಶನ್ ಪ್ರಕಾರ ಕೌನ್ಸಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿ (KAT) ತಿಳಿಸಿದೆ.

ದಿನಾಂಕ 01-09-2017 ರಂದು ಕರ್ನಾಟಕ ಲೋಕಸೇವಾ ಆಯೋಗವು 961 ಪ್ರಥಮ ದರ್ಜೆ ಸಹಾಯಕ ಹುದ್ದೆಗಳ 851 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿತ್ತು. 2018 ಲಿಖಿತ ಪರೀಕ್ಷೆ ನಡೆಸಿತ್ತು. ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಎರಡು ಹುದ್ದೆಗಳ ಪಟ್ಟಿಯಲ್ಲಿ ಇದ್ದಲ್ಲಿ ಆ ಅಭ್ಯರ್ಥಿಗಳನ್ನು ಕೌನ್ಸಲಿಂಗ್ ಮೂಲಕ ಒಂದು ಹುದ್ದೆಗೆ ನೇಮಿಸಿ ಆದೇಶ ನೀಡಲಾಗುವುದು ಎಂದು ನೋಟಿಫಿಕೇಶನ್‌ನಲ್ಲಿ ತಿಳಿಸಲಾಗಿತ್ತು.

ಎಫ್‌ಡಿಎ ಪಟ್ಟಿಯಲ್ಲಿ ಇದ್ದ ಅಭ್ಯರ್ಥಿಗಳನ್ನು ಎಸ್‌ಡಿಎ ಪಟ್ಟಿಯಿಂದ ಕೌನ್ಸಲಿಂಗ್ ನಡೆಸದೆ ಕೈ ಬಿಟ್ಟಿದ್ದರಿಂದ ಅಭ್ಯರ್ಥಿ ಬಯಸದೇ ಇರುವ ಇಲಾಖೆ ನಿಯೋಜನೆ ಮಾಡಿದರೆ ಅನ್ಯಾಯವಾಗಲಿದೆ ಎಂದು ಈ ಹಿಂದೆ ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಆದ್ದರಿಂದ 2017 ರಲ್ಲಿ ಕೌನ್ಸಲಿಂಗ್ ನಡೆಸುವ ನಿರ್ಧಾರವನ್ನು ಕರ್ನಾಟಕ ಲೋಕಸೇವಾ ಆಯೋಗ ಕೈಗೊಂಡಿತ್ತು.

ಇದಾದ ನಂತರ ಆಯೋಗದ ಕಾರ್ಯದರ್ಶಿ ಬದಲಾದ ಕಾರಣ ಕೌನ್ಸಲಿಂಗ್ ನಡೆಸುವುದು ಕೆಸಿಎಸ್‌ ( ಕರ್ನಾಟಕ ಸಿವಿಲ್ ಸೇವೆ) ನಿಯಮಗಳಿಗೆ ವಿರುದ್ಧ ಎಂದು ಹೊಸ ಕಾರ್ಯದರ್ಶಿ ತಡೆ ಹಿಡಿದಿದ್ದು , ಅತಂತ್ರಗೊಂಡಿದ್ದ ಅಭ್ಯರ್ಥಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿಯ ಮೊರೆ ಹೋಗಿದ್ದರು. ಈ ಮನವಿಯನ್ನು ವಿಚಾರಣೆ ನಡೆಸಿದ ಕೆಎಟಿ, ‘ನೇಮಕಾತಿ ಅಧಿಸೂಚನೆ ಪ್ರಕಾರವೇ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಕೌನ್ಸಲಿಂಗ್ ನಡೆಸುವುದು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳಿಗೆ ವಿರುದ್ಧ ಆಗುವುದಿಲ್ಲ’ ಎಂದು ಹೇಳಿದೆ.

Leave a Comment