ಜೆಸ್ಕಾಂ (ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ) ನಲ್ಲಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 18 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 26-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-03-2021
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಹುದ್ದೆ ಸಂಖ್ಯೆ : 205
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 7,000/- ವೇತನವಿರುತ್ತದೆ.
ಹೈದರಾಬಾದ್ ಕರ್ನಾಟಕ ರೀಜನ್ ಅಭ್ಯರ್ಥಿಗಳಿಗೆ ಒಟ್ಟು 164 ಹುದ್ದೆಗಳಿವೆ.
ನಾನ್ ಹೈದರಾಬಾದ್ ಕರ್ನಾಟಕ ರೀಜನ್ ಅಭ್ಯರ್ಥಿಗಳಿಗೆ 41 ಹುದ್ದೆಗಳಿವೆ.
ವಯೋಮಿತಿ: ಗುಲ್ಬರ್ಗಾ ಎಲೆಕ್ಟ್ರಿಕಲ್ ಕಂಪನಿ ಲಿಮಿಟೆಡ್ (ಜೆಸ್ಕಾಂ) ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ ಬೋರ್ಡ್ ನಿಂದ ಐಟಿಐ ತೇರ್ಗಡೆ ಹೊಂದಿರಬೇಕು.
ಅಭ್ಯರ್ಥಿಗಳು ಜೆಸ್ಕಾಂ ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಕಂಡ ವಿಳಾಸಕ್ಕೆ ದಿನಾಂಕ 18-03-2021 ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ಕಚೇರಿ ವಿಳಾಸ:
Chief Manager,GESCOM, Corporation office, Kalaburagi,Karnataka
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಾಡಿ.