ಗದಗ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಆಫ್ ಮೆಡಿಕಲ್ ಸೈನ್ಸ್ (GIMS) ಗದಗ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 15,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-03-2021(4pm)
ಗದಗ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಆಫಯ ಮೆಡಿಕಲ್ ಸೈನ್ಸ್ (GIMS) ನಲ್ಲಿ ಜ್ಯೂನಿಯರ್ ರೆಸಿಡೆಂಟ್, ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ : ಒಟ್ಟು 69 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: ಪ್ರೊಫೆಸರ್ – 4, ಅಸೋಸಿಯೇಟ್ ಪ್ರೊಫೆಸರ್ -8, ಅಸಿಸ್ಟೆಂಟ್ ಪ್ರೊಫೆಸರ್ -6, ಎಲ್ ಎಂಒ-8, ಸಿಎಂಒ-8,ಜ್ಯೂನಿಯರ್ ರೆಸಿಡೆಂಟ್-42, ಟ್ಯೂಟರ್-5
ವೇತನ: ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.37,400/- ರಿಂದ ರೂ.67,000/- ರವರೆಗೆ ವೇತನ ವಿರುತ್ತದೆ.
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,600/- ರಿಂದ ರೂ.39,100/- ವೇತನವಿರುತ್ತದೆ
ವಯೋಮಿತಿ: ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45,ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ 38,ಉಳಿದ ಹುದ್ದೆಗೆ ಎನ್ ಎಂಸಿ/ಎಂಸಿಐ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ವಿದ್ಯಾರ್ಹತೆ: ಪ್ರೊಫೆಸರ್ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಗೆ ಪೋಸ್ಟ್ ಗ್ರಾಜುಯೇಟ್, ಎಂಡಿ,ಎಂಎಸ್
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಎಂಬಿಬಿಎಸ್,ಪೋಸ್ಟ್ ಗ್ರಾಜ್ಯುಯೇಟ್,ಎಂಡಿ,ಎಂಎಸ್
ಉಳಿದ ಹುದ್ದೆಗಳಿಗೆ ಎನ್ ಎಂಸಿ/ಎಂಸಿಐ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.
ಅಭ್ಯರ್ಥಿಗಳು GIMS ಗದಗ್ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 15-03-2021 ( 4 pm)ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
The Director, Gadag Institute of Medical Sciences, Mallasamudra, Gadag – 582103
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ