Goa Shipyard Recruitment 2024: ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 106 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಾನ್ ಎಕ್ಸಿಕ್ಯೂಟಿವ್-ಅಸಿಸ್ಟಂಟ್ ಸೂಪರಿಂಟೆಂಡಂಟ್, ಟೆಕ್ನಿಕಲ್ ಅಸಿಸ್ಟಂಟ್, ಆಫೀಸ್ ಅಸಿಸ್ಟಂಟ್, ಕ್ಲೆರಿಕಲ್ ಸ್ಟಾಫ್, ಪೇಂಟರ್, ವೆಹಿಕಲ್ ಡ್ರೈವರ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಓದಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 28-02-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2024
ಹುದ್ದೆಗಳ ವಿವಿರ ಇಲ್ಲಿದೆ;
ಹುದ್ದೆಗಳ ವಿವರ;
ಅಸಿಸ್ಟಂಟ್ ಸೂಪರಿಂಟೆಂಡಂಟ್ : 04
ಟೆಕ್ನಿಕಲ್ ಅಸಿಸ್ಟಂಟ್ : 31
ಆಫೀಸ್ ಅಸಿಸ್ಟಂಟ್ – ಕ್ಲೆರಿಕಲ್ ಸ್ಟಾಫ್: 32
ಆಫೀಸ್ ಅಸಿಸ್ಟಂಟ್ (ಫೈನಾನ್ಸ್ / ಐಎ/) : 06
ಪೇಂಟರ್ : 20, ಹಾಗೂ ಉಳಿದಂತೆ ಇತರೆ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಒಟ್ಟು 106 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಯೋಮಿತಿ: ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 36 ವರ್ಷ ಮೀರಿರಬಾರದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಎಂಬಿಎ/ಇತರೆ ಪಿಜಿ/ಯುಜಿ/ವಿವಿಧ ಬ್ರ್ಯಾಂಚ್‌ಗಳಲ್ಲಿ ಡಿಪ್ಲೋಮಾ ಇನ್ ಇಂಜಿನಿಯರಿಂಗ್ ತೇರ್ಗಡೆ ಹೊಂದಿರಬೇಕು.
ಅರ್ಜಿ ಶುಲ್ಕ:
ಎಸ್‌ಸಿ,ಎಸ್‌ಟಿ, PWD, ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಉಳಿದವರು ರೂ.200 ಅರ್ಜಿ ಶುಲ್ಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿಶೇಷ ಸೂಚನೆ; ಅಭ್ಯರ್ಥಿಗಳು ಮೇಲ್ಕಂಡ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು. ಇತರೆ ಯಾವುದೇ ಮಾಧ್ಯಮದ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಮೇಲ್ಕಂಡ ಹುದ್ದೆಗಳನ್ನು ಮೂರು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ