ಸರಕಾರಿ ಕಚೇರಿಗಳ ಸಮಯ ಬದಲಾವಣೆ

Advertisements

ಬಿಸಿಲಿನ ತಾಪಮಾನ ಗರಿಷ್ಠಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಕಚೇರಿಗಳಲ್ಲಿ ಸಮಯದ ಬದಲಾವಣೆ ಮಾಡಲು ಸರಕಾರದ ಅಧೀನ ಕಾರ್ಯದರ್ಶಿ ಬಿ ಎಸ್ ರವಿಕುಮಾರ್‌ ಆದೇಶವನ್ನು ಹೊರಡಿಸಿದ್ದಾರೆ.

ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ವಿಜಯನಗರ, ಕೊಪ್ಪಳ ಮತ್ತು ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಜಿಲ್ಲಗಳಲ್ಲಿ ಸರಕಾರಿ ಕಚೇರಿಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಈ ಮೇಲಿನ ಸರಕಾರಿ ಕಚೇರಿಗಳು ಏ.12 ರಿಂದ ಮೇ. 31 ರವರೆಗೆ ಬದಲಾದ ವೇಳಾಪಟ್ಟಿ ಪ್ರಕಾರದಲ್ಲಿ ಕೆಲಸ ನಿರ್ವಹಿಸಲಿದೆ. ಸರಕಾರಿ ಕಚೇರಿಗಳ ಕೆಲಸದ ಸಮಯವು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ಇರಲಿದೆ.

ಕೊರೊನಾ ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನಿರ್ದೇಶನದಂತೆ ಕೆಲಸವನ್ನು ನಿರ್ವಹಿಸಲು ತಯಾರಿರಬೇಕು ಎಂದು ಸರಕಾರದ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

Leave a Comment