GSTAT Recruitment 2024: ಜಿಎಸ್‌ಟಿಎಟಿ ನಲ್ಲಿ ನ್ಯಾಯಾಂಗ, ತಾಂತ್ರಿಕ ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನ

Advertisements

GSTAT Recruitment 2024: ಸರಕು ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (GSTAT) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 96 ಖಾಲಿ ಹುದ್ದೆಗಳಿದ್ದು, ನ್ಯಾಯಾಂಗ ಸದಸ್ಯ, ತಾಂತ್ರಿಕ ಸದಸ್ಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಹುದ್ದೆ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 31-Mar-2024 ರಂದು ಅಥವಾ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು;
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19-02-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2024

ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ.
ಹುದ್ದೆಯ ವಿವರ:
ಹುದ್ದೆಯ ಹೆಸರು: ನ್ಯಾಯಾಂಗ ಸದಸ್ಯರು, ತಾಂತ್ರಿಕ ಸದಸ್ಯ (ಕೇಂದ್ರ), ತಾಂತ್ರಿಕ ಸದಸ್ಯ (ರಾಜ್ಯ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಸಂಖ್ಯೆ: ನ್ಯಾಯಾಂಗ ಸದಸ್ಯರು 63, ತಾಂತ್ರಿಕ ಸದಸ್ಯ (ಕೇಂದ್ರ) 32, ತಾಂತ್ರಿಕ ಸದಸ್ಯ (ರಾಜ್ಯ) 1- ಒಟ್ಟು 96 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಮೇಲ್ಕಂಡ ಹುದ್ದೆಗಳಿಗೆ GSTAT ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಸರಕು ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 50 ವರ್ಷಗಳು ಮತ್ತು ಗರಿಷ್ಠ 67 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಸರಕು ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣದ ನಿಯಮಗಳ ಪ್ರಕಾರ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಅರ್ಹತೆ, ಅನುಭವ, ವೈಯಕ್ತಿಕ ಸಂವಹನದ ಮೂಲಕ ಅರ್ಹ, ಆಸಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ