Advertisements
ಕಲಬುರಗಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ: ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ, ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಹತೆ: ಎಂಎ, ಎಂಎಸ್ಸಿ,ಬಿ.ಇಡಿ,ಎನ್ ಇಟಿ,ಎಸ್ ಎಲ್ ಇಟಿ ಅರ್ಹತೆ ಉಳ್ಳವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಸಂಬಂಧ ಪಟ್ಟ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಮಾರ್ಚ್ 25, 2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸ ಬಹುದು.