Advertisements
ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ವತಿಯಿಂದ 2020-21 ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರಾಗಿ ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಪ್ರಿಲ್ 19 ರಿಂದ ಒಂದು ವಾರಕ್ಕೆ 3 ಗಂಟೆಗಳ ಕಾಲ ಪಾಠ ಪ್ರವಚನಗಳನ್ನು ಪೂರೈಸಲು ಎಲ್.ಎಲ್.ಬಿ ಮತ್ತು ಎಲ್.ಎಲ್.ಎಂ ಪದವಿ ಯೊಂದಿಗೆ ಬೋಧನಾನುಭವ ಹೊಂದಿರುವ ಉಪನ್ಯಾಸಕರು ಅರ್ಜಿ ಸಲ್ಲಿಸಬಹುದು.
ಆಸಕ್ತರು ಎಪ್ರಿಲ್ 9ರ ಸಂಜೆ 4 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಚಾಮರಾಜೇಂದ್ರ ದೃಶ್ಯಕಲಾ ಕಾಲೇಜಿನ ದೂರವಾಣಿ ಸಂಖ್ಯೆಯನ್ನು ( 0821-2438931) ಸಂಪರ್ಕಿಸಬಹುದು.