HAL Recruitment 2024: ಹೆಚ್‌ಎಎಲ್‌ನಲ್ಲಿ 160 ಡಿಪ್ಲೋಮಾ, ಏರ್‌ಕ್ರಾಫ್ಟ್ ತಂತ್ರಜ್ಞರ ಹುದ್ದೆಗೆ ನೇಮಕಾತಿ; ಮಾಸಿಕ ರೂ.57,000 ವೇತನ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

HAL India Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 160 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಮತ್ತು ಏರ್‌ಕ್ರಾಫ್ಟ್ ತಂತ್ರಜ್ಞರ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗ ಹುಡುಕಲು ಇಚ್ಛಿಸುವವರು ಅರ್ಜಿ ಸಲ್ಲಿಸಲು ಉತ್ತಮ ಅವಕಾಶ. ಆಸಕ್ತ ಅಭ್ಯರ್ಥಿಗಳು 16-Mar-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-03-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಮಾರ್ಚ್-2024
ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 24-ಮಾರ್ಚ್-2024

ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
ಹುದ್ದೆ ಹೆಸರು: ಡಿಪ್ಲೊಮಾ ಮತ್ತು ವಿಮಾನ ತಂತ್ರಜ್ಞರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಸಂಖ್ಯೆ: ಡಿಪ್ಲೊಮಾ ಟೆಕ್ನಿಷಿಯನ್‌ ಗೆ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 137 ಹುದ್ದೆಗಳು ಖಾಲಿ ಇದೆ. ಮತ್ತು ವಿಮಾನ ತಂತ್ರಜ್ಞರು ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 23 ಹುದ್ದೆಗಳು ಖಾಲಿ ಇದೆ.

ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23000-57000/- ವೇತನ ದೊರಕಲಿದೆ.

ವಿದ್ಯಾರ್ಹತೆ: ಡಿಪ್ಲೊಮಾ ತಂತ್ರಜ್ಞರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಸಿಇ/ಇಇಇ/ಮೆಕ್ಯಾನಿಕಲ್‌ನಲ್ಲಿ ಡಿಪ್ಲೊಮಾ ತೇರ್ಗಡೆ ಹೊಂದಿರಬೇಕು. ಏರ್‌ಕ್ರಾಫ್ಟ್ ಟೆಕ್ನಿಷಿಯನ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಗರಿಷ್ಠ ವಯಸ್ಸು 31-ಡಿಸೆಂಬರ್-2023 ರಂತೆ 28 ವರ್ಷಗಳನ್ನು ಮೀರಿರಬಾರದು. OBC-NCL- 03 ವರ್ಷ, SC/ST 05 ವರ್ಷ, PwBD (ಸಾಮಾನ್ಯ) 10 ವರ್ಷ, PwBD (OBC) 13 ವರ್ಷ, PwBD (SC/ST) 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಉದ್ಯೋಗ ಪೂರ್ವ ವೈದ್ಯಕೀಯ ಪರೀಕ್ಷೆ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಮೇಲ್ಕಂಡ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಲಿಂಕ್‌ ಕ್ಲಿಕ್‌ ಮಾಡಿ;