ಎಚ್‌ಎಎಲ್ ಉದ್ಯೋಗವಕಾಶ

Advertisements

ಹಿಂದೂಸ್ತಾನ್ ಏರೋನಾಟಿಕ್ಸ್‌ ಲಿಮಿಟೆಡ್ (ಎಚ್‌ಎಎಲ್) ವಿವಿಧ ಹುದ್ದೆಗಳಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 5, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2021
ಓನ್‌ಲೈನ್ ಸೆಲೆಕ್ಷನ್ ಟೆಸ್ಟ್‌ ದಿನಾಂಕ : 24 & 25-04-2021

ಹಿಂದೂಸ್ತಾನ್ ಏರೋನಾಟಿಕ್ಸ್‌ ಲಿಮಿಟೆಡ್ ನಲ್ಲಿ ಮ್ಯಾನೆಜ್‌ಮೆಂಟ್ ಟ್ರೈನಿ ಮತ್ತು ಡಿಸೈನ್ ಟ್ರೈನಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆ : 100

ವಿದ್ಯಾರ್ಹತೆ : ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ : ಎಪ್ರಿಲ್ 5,2021 ಅನ್ವಯ ಗರಿಷ್ಠ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ : ಅರ್ಜಿದಾರರು ರೂ.500/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನುಪಾವತಿಸುವಂತಿಲ್ಲ.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/- ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಎಪ್ರಿಲ್ 5,2021 ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ನೋಟಿಫಿಕೇಶನ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment