ಎಚ್ ಎಎಲ್ ನಲ್ಲಿ ನೇಮಕ : ಅರ್ಜಿ ಸಲ್ಲಿಸಿ

Advertisements

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ ಎಎಲ್ )ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 22,2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 02-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2021
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಎಚ್ ಎಎಲ್ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

ಎಚ್ ಎಎಲ್ ನಲ್ಲಿ ಡಿಪ್ಲೋಮಾ ಇನ್ ಟೆಕ್ನಿಶಿಯನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಸ್ಥಳ : ಚೆನೈ- ತಮಿಳುನಾಡು

ವೇತನ : ಡಿಪ್ಲೋಮಾ ಟೆಕ್ನಿಶಿಯನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.43,954/- ತಿಂಗಳ ವೇತನ ವಿರುತ್ತದೆ.

ಡಿಪ್ಲೋಮಾ ಟೆಕ್ನಿಶಿಯನ್ ಒಟ್ಟು 4 ಹುದ್ದೆಗಳಿವೆ.

ಹುದ್ದೆಗಳ ವಿವರ : ಮೆಕ್ಯಾನಿಕಲ್ -1
ಎಲೆಕ್ಟ್ರಿಕಲ್-3

ವಯೋಮಿತಿ : ಅಭ್ಯರ್ಥಿಗಳು ಗರಿಷ್ಠ 31 ವಯೋಮಿತಿಗಿಂತ ಹೆಚ್ಚಿರಬಾರದು.(ಜನವರಿ 01, 2021 ರ ಅನ್ವಯ)

ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 2 ವರ್ಷ, ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ 7 ವರ್ಷ, ಪಿಡ್ಬ್ಯುಡಿ (ಒಬಿಸಿ) 10 ವರ್ಷ, ಪಿಡ್ಬ್ಯುಡಿ (ಎಸ್ ಟಿ) 12 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ/ಬೋರ್ಡ್ ನಿಂದ ಡಿಪ್ಲೋಮಾ ಇನ್ ಇಂಜಿನಿಯರಿಂಗ್ ವಿದ್ಯಾ ರ್ಹತೆಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ‌ನೀಡಿ ಅರ್ಜಿ ಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 22-03-2021 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಆನ್ ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment