HAL India Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೈದ್ಯಕೀಯ ಅಧಿಕಾರಿ, ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 13-ಮೇ-2024 ರಂದು ಅಥವಾ ಮೊದಲು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-05-2024
ಹುದ್ದೆಯ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ 04 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಇಲ್ಲಿ ಅರ್ಜಿ ಸಲ್ಲಿಸಬಹುದು. ವೈದ್ಯಕೀಯ ಅಧಿಕಾರಿ, ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿ ನಡೆಯಲಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40000-160000/- ವೇತನ ಸಿಗಲಿದೆ.
ಹುದ್ದೆ ಹೆಸರು ಮತ್ತು ಸಂಖ್ಯೆ:
ಹಿರಿಯ ವೈದ್ಯಾಧಿಕಾರಿ – 3 ಹುದ್ದೆ
ವೈದ್ಯಕೀಯ ಅಧಿಕಾರಿ – 1 ಹುದ್ದೆ
ವಿದ್ಯಾರ್ಹತೆ:
ಹಿರಿಯ ವೈದ್ಯಕೀಯ ಅಧಿಕಾರಿ: MBBS, M.D, M.S, DNB, DLO, ಸ್ನಾತಕೋತ್ತರ ಪದವಿ ಮಾಡಿರಬೇಕು.
ವೈದ್ಯಕೀಯ ಅಧಿಕಾರಿ: ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಹಿರಿಯ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 45ವರ್ಷ ಮೀರಿರಬಾರದು.
ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 35ವರ್ಷ ಮೀರಿರಬಾರದು. OBC (NCL) ಅಭ್ಯರ್ಥಿಗಳಿಗೆ 03 ವರ್ಷ, PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ : SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಎಲ್ಲಾ ಇತರ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕ ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವೇತನ: ಹಿರಿಯ ವೈದ್ಯಾಧಿಕಾರಿ (ಪ್ರತಿ ತಿಂಗಳಿಗೆ) ರೂ.50000-160000/- ವೇತನ ನೀಡಲಾಗುವುದು.
ವೈದ್ಯಾಧಿಕಾರಿ ( ಪ್ರತಿ ತಿಂಗಳಿಗೆ) ರೂ.40000-140000/- ವೇತನ ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗೆ ನೀಡಲಾದ ವಿಳಾಸಕ್ಕೆ 13-ಮೇ-2024 ಅಥವಾ ಮೊದಲು ಕಳುಹಿಸಬೇಕು.
ವಿಳಾಸ: Chief Manager (HR)
Hindustan Aeronautics Limited,
Industrial Health Center,
Suranjandas Road,
Vimanapura Post,
Bangalore – 560017
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ