Grama Panchayat: ಗ್ರಾ.ಪಂಚಾಯಿತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ; ಮಾಸಿಕ ರೂ.15ಸಾವಿರಕ್ಕಿಂತ ಹೆಚ್ಚು ಸಂಬಳ, ಅರ್ಜಿ ಸಲ್ಲಿಕೆಗೆ ಮಾ.22 ಕಡೆಯ ದಿನ

Advertisements

Hassan District Grama Panchayath Recruitment 2024: ಹಾಸನ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ಚಿಚಾರಕರ ಹುದ್ದೆಗಳನ್ನು ನೇಮಕಾತಿ ಮಾಡಲಾಗುವುದೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಹಾಸನ ಜಿಲ್ಲೆಯ ವೆಬ್‌ಸೈಟ್‌ನಲ್ಲಿ https://hassan.nic.in ಆನ್‌ಲೈನ್‌ ಮೂಲಕ ಭರ್ತಿ ಮಾಡಿ ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಸಲ್ಲಿಸಲು ಹೇಳಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 22-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2024

ಹುದ್ದೆಗಳ ವಿವರ:
ಹುದ್ದೆ: ಗ್ರಾಮಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಕರ್ತವ್ಯ ನಿರ್ವಹಿಸುವ ಸ್ಥಳ: ಹಾಸನ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಣೆ

ವಿದ್ಯಾರ್ಹತೆ: ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿಯುಸಿ) ಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಸರ್ಟಿಫಿಕೇಷನ್‌ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಹಾಗೂ ಕನಿಷ್ಠ ಮೂರು ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್‌ ಕೋರ್ಸ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಗ್ರಾಮಪಂಚಾಯತ್‌ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತತ್ಸಮಾನ ವಿದ್ಯಾರ್ಹತೆ ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗೆ ನೀಡಲಾಗಿದೆ.
ಸಾಮಾನ್ಯ ವರ್ಗ -35 ವರ್ಷ, 2ಎ,2ಬಿ,3ಎ,3ಬಿ 38 ವರ್ಷ, ಪ.ಜಾ/ಪ.ಪಂ/ಪ್ರ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500, ಪ್ರವರ್ಗ 2(ಎ),2(ಬಿ),3(ಎ),3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.200, ಎಲ್ಲಾ ವಿಧಗಳ ವಿಕಲಚೇತನ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಪಾವತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು, ಮುಖ್ಯ ಲೆಕ್ಕಾಧಿಕಾರಿ, ಜಿಲ್ಲಾ ಪಂಚಾಯತ್‌ ಹಾಸನ ಇವರ ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕು. ಅಥವಾ ಅಧಿಸೂಚನೆಯಲ್ಲಿ ನೀಡಲಾಗಿರುವ QR ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.

ವೇತನ: ಗ್ರಾಮಪಂಚಾಯತ್‌ ಗ್ರಂಥಾಲಯ ಮೇಲ್ಚಿಚಾರಕರಿಗೆ ಪ್ರತಿ ಮಾಹಿ ಮಾಸಿಕ ಕನಿಷ್ಠ ವೇತನ ರೂ.15196.72/- ಹಾಗೂ ಕನಿಷ್ಠ ವೇತನ ಜೊತೆಗೆ ಕಾರ್ಮಿಕ ಇಲಾಖೆ ಕಾಲ ಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿಭತ್ಯೆಯನ್ನು (VDA) ಪಾವತಿಸಲಾಗುವುದು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್‌ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ಕ್ಲಿಕ್‌ ಮಾಡಿ