ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಜಿಲ್ಲೆಯ 8 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 22 ಅಂಗನವಾಡಿ ಕಾರ್ಯಕರ್ತೆ ಯರು ಮತ್ತು 87 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆದೇಶ ಹೊರಡಿಸಿದೆ.
ಆದೇಶ ಮತ್ತು ಮಾರ್ಗಸೂಚಿ ಪ್ರಕಾರ ಗೌರವಧನ ಸೇವೆಯ ಆಧಾರದಲ್ಲಿ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-07-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-08-2021 ಗಂಟೆ 5.30
ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು.
ವಯೋಮಿತಿ 18 ರಿಂದ 35 ವರ್ಷ ( ಈ ಅಧಿಸೂಚನೆಯ ಕೊನೆಯ ದಿನಾಂಕಕ್ಕೆ 35 ವರ್ಷ ಮೀರಿರಬಾರದು, ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10/ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಹಾಗೂ ಎಸ್ ಎಸ್ ಎಲ್ ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ ಮಾತ್ರ ಪರಿಗಣಿಸಲಾಗುವುದು.
ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಉತ್ತೀರ್ಣರಾಗಿರಬೇಕು. ಗರಿಷ್ಠ 9 ನೇ ತರಗತಿಯವರೆಗೆ ತೇರ್ಗಡೆ ಯಾಗಿರಬೇಕು. 9 ನೇ ತರಗತಿಯಿಂದ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದಲ್ಲಿ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಯು ವಿಧವೆ ಆದಲ್ಲಿ ಪತಿಯ ಮರಣ ಪ್ರಮಾಣ ಪತ್ರ ಲಗತ್ತಿಸಬೇಕು. ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಸಂಬಂಧಿಸಿದ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗೆ ವಿಕಲಚೇತನ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ.