ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 22 ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2021
ಡಾಕ್ಯುಮೆಂಟ್ ವೆರಿಫಿಕೇಶನ್ ದಿನಾಂಕ : 26-03-2021 (10.30 a.m ನಿಂದ 5.00 pm)
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹುದ್ದೆಗಳ ವಿವರ : ಹಾವೇರಿ ಜಿಲ್ಲಾ ಪಂಚಾಯತ್ ನಲ್ಲಿ ತಾಲ್ಲೂಕು MIS ಕಾರ್ಡಿನೇಟರ್-1
ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ -06
ಟೆಕ್ನಿಕಲ್ ಅಸಿಸ್ಟೆಂಟ್ – 14 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆ : 21

ವಿದ್ಯಾರ್ಹತೆ : ತಾಲ್ಲೂಕು MIS ಕಾರ್ಡಿನೇಟರ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಗ್ರಾಜ್ಯುಯೇಶನ್, ಪೋಸ್ಟ್ ಗ್ರಾಜ್ಯುಯೇಶನ್, ಎಂಸಿಎ ಪಾಸಾಗಿರಬೇಕು.
ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಇ ಅಥವಾ ಬಿ.ಟೆಕ್ ತೇರ್ಗಡೆ ಹೊಂದಿರಬೇಕು.
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಡಿಪ್ಲೋಮಾ, ಬಿಇ, ಅಥವಾ ಬಿ.ಟೆಕ್ ಪಾಸಾಗಿರಬೇಕು.

ವಯೋಮಿತಿ : ತಾಲ್ಲೂಕು MIS ಕಾರ್ಡಿನೇಟರ್-40 ವಯೋಮಿತಿ
ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ ಹಾಗೂ
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ 45 ವಯೋಮಿತಿ ಹೊಂದಿರಬೇಕು.

MGNREGA ನಲ್ಲಿ ಕೆಲಸ ಮಾಡುವ ಅಭ್ಯರ್ಥಿಗಳಿಗೆ 4 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ: ತಾಲ್ಲೂಕು MIS ಕಾರ್ಡಿನೇಟರ್- 18,000/-
ತಾಲ್ಲೂಕು ಟೆಕ್ನಿಕಲ್ ಕಾರ್ಡಿನೇಟರ್ -29,000/-
ಟೆಕ್ನಿಕಲ್ ಅಸಿಸ್ಟೆಂಟ್ – 19,000/- ರಿಂದ 24,000/- ರೂ.ಗಳವರೆಗೆ ತಿಂಗಳ ವೇತನ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಹಾವೇರಿ ಜಿಲ್ಲಾ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment