ಜಿಲ್ಲಾ ಪಂಚಾಯತ್ ಚಾಮರಾಜನಗರ: 149 ಹುದ್ದೆ: ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

ಕೋವಿಡ್ -19 ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಚಾಮರಾಜನಗರ ಈ ಕಚೇರಿಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕ -111 ಹುದ್ದೆಗಳು ಹಾಗೂ ಗ್ರೂಪ್ ಡಿ-29 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನಿಯಮಾನುಸಾರ ಮೆರಿಟ್ ಕಂ ರೋಸ್ಟರ್ ಮೂಲಕ ದಿನಾಂಕ : 30-09-2021 ರವರೆಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕಾತಿ ಮಾಡಲು ಹಾಗೂ ಈ ಕಚೇರಿಯ ಅಧೀನ ತಾಲ್ಲೂಕು ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ‌ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ : ವೈದ್ಯಾಧಿಕಾರಿ – 03 ಹುದ್ದೆಗಳು
ಶುಶ್ರೂಷಾಧಿಕಾರಿ : 03 ಹುದ್ದೆಗಳು
ಕಿರಿಯ ಆರೋಗ್ಯ ಸಹಾಯಕರು ( ಮಹಿಳೆ) : 111 ಹುದ್ದೆಗಳು
ಗ್ರೂಪ್ ಡಿ : 32 (03+29)

ಸಂದರ್ಶನ ದಿನಾಂಕ : ವೈದ್ಯಾಧಿಕಾರಿ ಹಾಗೂ ಶುಶ್ರೂಷಾಧಿಕಾರಿ ಹುದ್ದೆಗಳಿಗೆ 15-05-2021 ಸಮಯ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ ‌2.00 ಗಂಟೆಯವರೆಗೆ.

ಕಿರಿಯ ಆರೋಗ್ಯ ಸಹಾಯಕರು ( ಮಹಿಳೆ) ಹಾಗೂ ಗ್ರೂಪ್ ಡಿ ಹುದ್ದೆಗಳಿಗೆ ದಿನಾಂಕ 17-05-2021 ಸಮಯ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ

ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೊಠಡಿ ಸಂಖ್ಯೆ :312, ಮೂರನೇ ಮಹಡಿ, ಜಿಲ್ಲಾಡಳಿತ ಭವನ, ಚಾಮರಾಜನಗರ ಇಲ್ಲಿ ಏರ್ಪಡಿಸಲಾಗಿದೆ.

Leave a Comment