62 ಆರೋಗ್ಯ ಸಹಾಯಕಿ ಹುದ್ದೆಗೆ ನೇಮಕ

Advertisements

ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-04-2021 ರೊಳಗೆ ಕಚೇರಿಗೆ ನೇರವಾಗಿ ಮೂಲ ದಾಖಲೆಗಳೊಂದಿಗೆ ಹಾಜರಾಗತಕ್ಕದ್ದು.

ನೇಮಕ‌‌‌ ಮಾಡಿಕೊಳ್ಳಬೇಕಾದ ಸಂಖ್ಯೆ : 62

ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಅನುಭವ: ಗಣಕಯಂತ್ರ ತರಬೇತಿ ಹೊಂದಿರಬೇಕು.

ವಿದ್ಯಾರ್ಹತೆ : ಎಎನ್ ಎಂ ತರಬೇತಿಯಲ್ಲಿ ತೇರ್ಗಡೆ/ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸದರಿ ಹುದ್ದೆಯು 6 ತಿಂಗಳ ‌ಮಟ್ಟಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು. ಯಾವ ಅಭ್ಯರ್ಥಿ ನೇಮಕಾತಿಗಾಗಿ ಅತೀ ಜರೂರು ಇರುವುದರಿಂದ ಮೊದಲಿಗೆ ಮೂಲ ದಾಖಲೆಗಳನ್ನು ಸಲ್ಲಿಸುತ್ತಾರೋ ಅಂತಹ ಅಭ್ಯರ್ಥಿಗಳಿಗೆ ಆಧ್ಯತೆ ನೀಡಿ ನೇಮಕ ಮಾಡಿಕೊಳ್ಳುವುದು.

Leave a Comment