ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹುದ್ದೆ

Advertisements

‘ಜೀವಸಾರ್ಥಕತೆ’ ಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಂದು ಭಾಗ. ಇಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ವಿವರಗಳು ಈ ಕೆಳಗಿನಂತಿವೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 03-04-2021

ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳಿಗೆ ಸಂದರ್ಶನ ದಿನಾಂಕ : 06-04-2021

ಹುದ್ದೆ : ಅಂಗಾಂಗ ಕಸಿ ಹುದ್ದೆ ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಈ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿದೆ.

ರಾಜ್ಯದಲ್ಲಿ ಮೃತದಾನಿ ಅಂಗಾಂಗ ಕಸಿ ಕಾರ್ಯಕ್ರಮದ ಸಂಯೋಜನೆಯಲ್ಲಿ ನೆರವಾಗಬೇಕಾಗುತ್ತದೆ.

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್/ಬಿಡಿಎಸ್/ಎಂಎಸ್ಸಿ ( ನರ್ಸಿಂಗ್ ಮತ್ತು ಸಂಬಂಧಿತ ವೈದ್ಯಕೀಯ ವಿಷಯಗಳು)/ ಎಂಎಸ್ ಡಬ್ಲ್ಯೂ ಹೊಂದಿರಬೇಕು.

ಮೇಲೆ ತಿಳಿಸಿದ ಹುದ್ದೆಯಲ್ಲಿ ಅಭ್ಯರ್ಥಿಯು ಕನಿಷ್ಠ ಒಂದು ವರ್ಷದ ಸೇವಾ ಅನುಭವ ಹೊಂದಿರಬೇಕು.

ಅಂಗಾಂಗ ಕಸಿ ಕಾರ್ಯಕ್ರಮ ಏರ್ಪಡಿಸುವಲ್ಲಿ ಸಾಂಸ್ಥಿಕ ಮತ್ತು ಆಡಳಿತಾತ್ಮಕ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ವೇತನ ರೂ.50,000/- ಗೌರವ ಧನ ನೀಡಲಾಗುತ್ತದೆ.

ವಯೋಮಿತಿ : ಗರಿಷ್ಠ 60 ವರ್ಷದ ಮೀರದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ಅಭ್ಯರ್ಥಿಗಳು ಅರ್ಜಿಯನ್ನು ಜಂಟಿ‌ ನಿರ್ದೇಶಕರು (ವೈದ್ಯಕೀಯ) ರವರ ಕಚೇರಿ, ಆರೋಗ್ಯ ಸೌಧ, 6 ನೇ ಮಹಡಿ, ಮಾಗಡಿ ರಸ್ತೆ, ಬೆಂಗಳೂರು- 560023

Leave a Comment