ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 27 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆ : 94 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಸಕ್ತರು ಆನ್‌ಲೈನ್ ಮೂಲಕ ಎಪ್ರಿಲ್ 27, 2021 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅರ್ಜಿ ಶುಲ್ಕ : ಅರ್ಜಿದಾರರು ರೂ.500/- ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ಅಭ್ಯರ್ಥಿಗಳು ರೂ.250/- ಪಾವತಿಸಬೇಕಾಗುತ್ತದೆ.
ವೇತನ : ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,700/- ರಿಂದ ರೂ. 44,770/- ರೂ.ಗಳ ವರೆಗೆ ವೇತನವಿರುತ್ತದೆ.
ವಿದ್ಯಾರ್ಹತೆ : ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಉಚ್ಛ ನ್ಯಾಯಾಯಲಯದ ಅಧಿಕೃತವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಎಪ್ರಿಲ್ 27,2021 ರಾತ್ರಿ 11.59 ರೊಳಗೆ ಅರ್ಜಿಯನ್ನು ಸಲ್ಲಿಸಬಹದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ