HMT : ಬೆಂಗಳೂರು : ಕಂಪನಿ ಟ್ರೈನೀಸ್ ಹುದ್ದೆಗೆ ಅರ್ಜಿ ಆಹ್ವಾನ

Advertisements

ಹೆಚ್ ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆ : ಕಂಪನಿ ಟ್ರೈನೀಸ್ (ವರ್ಕ್ ಮೆನ್ )

ಹುದ್ದೆ ಸ್ಥಳ : ಜಾಲಹಳ್ಳಿ – ಕರ್ನಾಟಕ

ಅರ್ಜಿ ಶುಲ್ಕ : ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ಜನರಲ್ , ಇಡ್ಬ್ಯುಎಸ್/ ಒಬಿಸಿ ಅಭ್ಯರ್ಥಿಗಳಿಗೆ ರೂ.500/-, ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಹುದ್ದೆ ಸಂಖ್ಯೆ : 12

ಹುದ್ದೆ ವಿವರ : ಮೆಶಿನಿಸ್ಟ್, ಫಿಟ್ಟರ್, ಗ್ರೈಂಡರ್, ಎಲೆಕ್ಟ್ರಿಶಿಯನ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅಭ್ಯರ್ಥಿಗಳು NCVT/ITI+NAC ನ್ನು ಯಾವುದೇ ಅಂಗೀಕೃತ ಬೋರ್ಡ್/ಇನ್ಸ್ಟಿಟ್ಯೂಟ್ ನಿಂದ ಪಡೆದಿರಬೇಕು.

ವಯೋಮಿತಿ : ಅಭ್ಯರ್ಥಿಗಳ ವಯೋಮಿತಿಯು 33 ವರ್ಷ ಮೀರಿರಬಾರದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment