ಹೆಚ್ ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-03-2021
ಹೆಚ್ ಎಂಟಿ ನಲ್ಲಿ ಎಕ್ಸಿಕ್ಯುಟಿವ್ ಟೆಕ್ನಿಕಲ್ ಬಿ ಹುದ್ದೆಗಳ ನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ- 4
ವಿದ್ಯಾರ್ಹತೆ: ಅಂಗೀಕೃತ ಬೋರ್ಡ್ /ಸಂಸ್ಥೆ ಯಿಂದ ಬಿ.ಟೆಕ್ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ವಯೋಮಿತಿ: ಅಭ್ಯರ್ಥಿಗಳು 30 ವಯೋಮಿತಿ ಯನ್ನು ಮೀರಿರಬಾರದು.( ಮಾರ್ಚ್ 1,2021 ರ ಅನ್ವಯ)
ವೇತನ: ಎಕ್ಸಿಕ್ಯುಟಿವ್ ಟೆಕ್ನಿಕಲ್-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.16,500/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: http://www.hmtmachinetools.com