ಹೆಚ್ ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 15 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆಫ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2021
ಹುದ್ದೆ: ಹೆಚ್ ಎಂಟಿನಲ್ಲಿ ಜಾಯಿಂಟ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ: 21
ಅರ್ಜಿ ಶುಲ್ಕ : ಅರ್ಜಿದಾರರು ರೂ. 750/- ಮತ್ತು ಆರ್ಥಿಕವಾಗಿ ಹಿಂದುಳಿದ/ಒಬಿಸಿ ಅಭ್ಯರ್ಥಿಗಳು ರೂ.500/-,
ಪರಿಶಿಷ್ಟ ಜಾತಿ/ಪಂಗಡ ಅಭ್ಯರ್ಥಿಗಳಿಗೆ ರೂ.250/-, ಮತ್ತು ರೂ.250/-ನ್ನು ಪ್ರೊಸೆಸಿಂಗ್ ಶುಲ್ಕವನ್ನು ಡಿ.ಡಿ.ಮೂಲಕ ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ: ಜನರಲ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.18,500/- ರಿಂದ ರೂ.23,900/- ವೇತನ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: ಇಂಜಿನಿಯರಿಂಗ್ ಪದವಿ, ಎಂಬಿಎ/ ಪಿಜಿಡಿಬಿಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಎಪ್ರಿಲ್ 15, 2021 ರೊಳಗೆಸಲ್ಲಿಸಬೇಕು. ಲಕೋಟೆ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.
ವಿಳಾಸ : The Deputy General Manager ( CP & HR)HMT Machine tools ltd.,HMT Bhavan, No.59, Bellary Road, Bangalore-560032.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ