ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್ ಪಿಸಿಎಲ್ ) ನಲ್ಲಿ ವಿವಿಧ ಹುದ್ದೆಗಳಿದ್ದು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ಮೆಕ್ಯಾನಿಕಲ್, ಸಿವಿಲ್, ಇಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಶನ್ ವಿಭಾಗಗಳ ಇಂಜಿನಿಯರ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹೆಚ್ ಪಿಸಿಎಲ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಪ್ರಿಲ್ 15, 2021 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 03-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-04-2021
ಹುದ್ದೆಗಳ ವಿವರ : ಮೆಕ್ಯಾನಿಕಲ್ ಇಂಜಿನಿಯರ್ -120
ಸಿವಿಲ್ ಇಂಜಿನಿಯರ್ -30
ಇಲೆಕ್ಟ್ರಿಕಲ್ ಇಂಜಿನಿಯರ್- 25
ಇನ್ಸ್ಟ್ರುಮೆಂಟೇಶನ್-25
ಅರ್ಜಿ ಶುಲ್ಕ : ಸಾಮಾನ್ಯ/ಒಬಿಸಿ/ಇಡ್ಬ್ಯುಎಸ್ ಅಭ್ಯರ್ಥಿಗಳಿಗೆ ರೂ. 1800/- ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪಿಡ್ಬ್ಯುಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಅಪ್ಲಿಕೇಶನ್ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗ್ರೂಪ್ ಟಾಸ್ಕ್, ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಕ್ಯಾನಿಕಲ್, ಸಿವಿಲ್, ಇಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಶನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ