ಹುನಗುಂದ ಆರೋಗ್ಯ ಕೇಂದ್ರದಲ್ಲಿ ವಿವಿಧ ಹುದ್ದೆ, ನೇರ ಸಂದರ್ಶನದ ಮೂಲಕ ನೇಮಕ

Advertisements

ಕೋವಿಡ್ ನಿಯಂತ್ರಣಕ್ಕಾಗಿ ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಾಗುತ್ತಿದೆ.

ಹುನಗುಂದ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ :ಶ್ರುಶೂಷಾಧಿಕಾರಿಗಳು- 10, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ – 1, ಗಣಕಯಂತ್ರ ದತ್ತಾಂಶ ನಮೂದಕ – 1, ಗ್ರೂಪ್ ಡಿ ಹುದ್ದೆ – 15, ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ – 1, ಫಾರ್ಮಸಿ ಅಧಿಕಾರಿ – 1

ನೇರ ಸಂದರ್ಶನ ದಿನಾಂಕ ಮತ್ತು ಸಮಯ : ಈ ಮೇಲಿನ ಎಲ್ಲಾ ಹುದ್ದೆಗಳಿಗೆ ದಿನಾಂಕ ಜೂನ್ 07 ರಂದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಹುನಗುಂದ ತಾಲೂಕಿನ ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆಸಲಿದೆ.

ಈ ಹುದ್ದೆಯು ತಾತ್ಕಾಲಿಕವಾಗಿದ್ದು 5 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಂದರ್ಶನದ ಸಮಯದಲ್ಲಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಗತ್ಯ ದಾಖಲೆಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. 99001131419

Leave a Comment