IAF Recritment2024: ಭಾರತೀಯ ವಾಯುಪಡೆಯಲ್ಲಿ (IAF) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 304 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕಮಿಷನ್ಡ್ ಆಫೀಸರ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅಖಿಲ ಭಾರತ ಸರ್ಕಾರದಲ್ಲಿ ಪೋಸ್ಟಿಂಗ್ ನಡೆಯಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕ 28-Jun-2024 ಕೊನೆಯ ದಿನವಾಗಿದ್ದು, ಇದಕ್ಕೂ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 30-05-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-06-2024
ಹುದ್ದೆಯ ಕುರಿತ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಇಂಡಿಯನ್ ಏರ್ ಫೋರ್ಸ್ (IAF) ಕಮಿಷನ್ಡ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 304 ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.56100-177500/- ವೇತನ ಸಿಗಲಿದೆ.
ಹುದ್ದೆಯ ಹೆಸರು ಮತ್ತು ಪೋಸ್ಟ್‌ಗಳ ಸಂಖ್ಯೆ
ಫ್ಲೈಯಿಂಗ್ ಬ್ರಾಂಚ್ – 29 ಹುದ್ದೆಗಳು
ಗ್ರೌಂಡ್ ಡ್ಯೂಟಿ (ತಾಂತ್ರಿಕ) – 156 ಹುದ್ದೆಗಳು
ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)- 119 ಹುದ್ದೆಗಳು
ವಿದ್ಯಾರ್ಹತೆ: ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ IAF ಮಾನದಂಡಗಳ ಪ್ರಕಾರ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ವಯೋಮಿತಿ:
ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-24 ವರ್ಷದೊಳಗಿರಬೇಕು.
ಗ್ರೌಂಡ್ ಡ್ಯೂಟಿ (ತಾಂತ್ರಿಕ), ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-26 ವರ್ಷದೊಳಗಿರಬೇಕು.
ಭಾರತೀಯ ವಾಯುಪಡೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸಲಾಗುತ್ತದೆ.
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.550/-ನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬೇಕು. ಬೇರೆ ಯಾವುದೇ ವಿಧಾನದಿಂದ ಪಾವತಿ ಮಾಡಬಾರದು.
ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವೇತನ:
ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100-177500/- ವೇತನ ಇರಲಿದೆ.
ಗ್ರೌಂಡ್ ಡ್ಯೂಟಿ (ತಾಂತ್ರಿಕ), ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) ಹುದ್ದೆಗೆ ಆಯ್ಕೆಯಾದವರಿಗೆ IAF ಮಾನದಂಡಗಳ ಪ್ರಕಾರ ವೇತನ ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ