,
ಗ್ರಾಮೀಣ ಬ್ಯಾಂಕ್ ಗಳಲ್ಲಿನ ಹುದ್ದೆಗಳಿಗೆ ಕನ್ನಡದಲ್ಲಿಯೇ ಪರೀಕ್ಷೆ ನಡಸಲಾಗುತ್ತಿದ್ದರೂ, ರಾಜ್ಯದಲ್ಲಿ ಒಂದೇ ಒಂದು ಹುದ್ದೆ ಇಲ್ಲ ಎಂಬ ವಿಷಯಕ್ಕೆ ಈಗ ರಾಜ್ಯದಲ್ಲಿ 478 ಹುದ್ದೆಗಳಿಗೆ ನೇಮಕ ಮಾಡುವುದಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಈ ಸುದ್ದಿ ರಾಜ್ಯದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.
ರಾಜ್ಯದ ಎರಡು ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಒಟ್ಟಾರೆ 478 ಹುದ್ದೆಗಳಿಗೆ ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಬರೆಯಬಹುದು. ರಾಜ್ಯದ 12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಮುಖ್ಯ ಪರೀಕ್ಷೆ ಆನ್ಲೈನ್ ಮೂಲಕ ನಡೆಯಲಿದೆ.
ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನೇಮಕ ಪ್ರಕ್ರಿಯೆಯಲ್ಲಿದೆ. ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ( ಸ್ಕೇಲ್ 1) ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ: IBPS RRB ಅಧಿಸೂಚನೆ ಪ್ರಕಟ: ಗ್ರಾಮೀಣ ಬ್ಯಾಂಕ್‌ಗಳಲ್ಲಿನ 10,447 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ವಿವರ
ರಾಜ್ಯದಲ್ಲಿ 261 ಆಫೀಸ್ ಅಸಿಸ್ಟೆಂಟ್ ( ಮಲ್ಟಿ ಪರ್ಪಸ್) ಹುದ್ದೆಗಳಿಗೆ ನೇಮಕ ಮಾಡಲಿದ್ದು, ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿನ160 ಮತ್ತು ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 101 ಹುದ್ದೆಗಳಿವೆ. 201 ಆಫೀಸರ್ (ಸ್ಕೇಲ್ -1) ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಇದರಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 87 ಮತ್ತು ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 130 ಹುದ್ದೆಗಳಿವೆ.
ಅರ್ಹತೆ : ಯಾವುದೇ ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸ್ಥಳೀಯ ಭಾಷೆ ಓದಲು ಬರೆಯಲು ತಿಳಿದಿರಬೇಕು.
ಆಫೀಸ್ ಅಸಿಸ್ಟೆಂಟ್ ಹುದ್ದೆಗೆ 18 ರಿಂದ 28 ಮತ್ತು ಆಫೀಸರ್ ಹುದ್ದೆಗೆ 18 ರಿಂದ 30 ವರ್ಷ ದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿಯಲ್ಲಿ ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 5 ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಆನ್ಲೈನ್ ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಮಾತ್ರ ಅವಕಾಶವಿದೆ.
ರಾಜ್ಯದ ಎರಡು ಗ್ರಾಮೀಣ ಬ್ಯಾಂಕುಗಳೂ ಒಟ್ಟು 478 ಹುದ್ದೆಗಳಿಗೆ ನೇಮಕ ನಡೆಸುವಂತೆ ಈ ಹಿಂದೆಯೇ ಐಬಿಪಿಎಸ್ ಬೇಡಿಕೆ ಸಲ್ಲಿಸಿದ್ದವು. ಆದರೆ ಐಬಿಪಿಎಸ್ ನಿರ್ಲಕ್ಷ್ಯ ತೋರಿದ್ದರಿಂದ ರಾಜ್ಯದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿತ್ತು. ಹೀಗಾಗಿ ರಾಜ್ಯದಲ್ಲಿ ಹುದ್ದೆಗಳೇ ಇಲ್ಲ ಎಂದು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿರಲಿಲ್ಲ.