IIMB Recruitment 2024: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆಯನ್ನು ಇನ್ನೂ ನಿರ್ದಿಷ್ಟ ಪಡಿಸಿಲ್ಲ. ಅಭ್ಯರ್ಥಿಗಳು ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅಕಾಡೆಮಿಕ್ ಅಸೋಸಿಯೇಟ್ – ಪ್ರೊಡಕ್ಷನ್ ಮತ್ತು ಆಪರೇಷನ್ ಮ್ಯಾನೇಜ್‌ಮೆಂಟ್ ಏರಿಯಾ ಪೋಸ್ಟ್‌ಗಳನ್ನು ಐಐಎಂಬಿ ಅಧಿಕೃತ ಅಧಿಸೂಚನೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಪೋಸ್ಟಿಂಗ್ ನಡೆಯಲಿದೆ. 14-ಜೂನ್-2024 ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30-05-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-06-2024
ಹುದ್ದೆಯ ಕುರಿತ ವಿವರ ಇಲ್ಲಿದೆ;
ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಇಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.38000-44000/- ವೇತನ ಸಿಗಲಿದೆ.
ವಿದ್ಯಾಭ್ಯಾಸ: ಅರ್ಥಶಾಸ್ತ್ರ, ಅಂಕಿಅಂಶಗಳು, ವ್ಯಾಪಾರ ಅನಾಲಿಟಿಕ್ಸ್ ಅಥವಾ ಇಂಡಸ್ಟ್ರಿಯಲ್ ಇಂಜಿನಿಯರಿಂಗ್/ಆಪರೇಷನ್ ರಿಸರ್ಚ್, MBA, ಯಾವುದೇ ವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ತೇರ್ಗಡೆ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಐಐಎಂಬಿ ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಯೋಮಿತಿ ಮಿತಿಯನ್ನು ಹೊಂದಿರಬೇಕು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿಲ್ಲ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.